ಈ ಸಾಲಿನ ಕೆಂಪೆಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಮೂರು ಜನ ಹಿರಿಯ ಸಾಧಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ನಾಡ ಪ್ರಭು ಕೆಂಪೇಗೌಡರ ಗೌರವಾರ್ಥ ನೀಡಲಾಗುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಮತ್ತು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಯ್ಕೆ ಮಾಡಲಾಗಿದೆ.ಇದನ್ನು ಓದಿ –ಬೃಹತ್ ಮರ ಕಾರಿನ ಮೇಲೆ ಬಿದ್ದು ದುರಂತ – ಬ್ಯಾಂಕ್ ಮ್ಯಾನೇಜರ್ ಸ್ಥಳದಲ್ಲೇ ಸಾವು
ಮೂವರು ಗಣ್ಯರೂ ಬೆಂಗಳೂರಿನ ಬೆಳವಣಿಗೆಗೆ ಮತ್ತು ಕೀರ್ತಿಗೆ ತಮ್ಮದೇ ಆದ ಅನನ್ಯ ವಿಧಾನಗಳ ಮೂಲಕ ಅನುಪಮ ಕೊಡುಗೆ ನೀಡಿದ್ದಾರೆ. ಸಾಧಕರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರದ ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.
ಇದನ್ನು ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದು, ಜೂನ್ 27ರಂದು ವಿಧಾನಸೌಧದಲ್ಲಿ ನಡೆಯಲಿರುವ ಕೆಂಪೇಗೌಡರ 513ನೆ ಜಯಂತಿ ಕಾರ್ಯಕ್ರಮದಲ್ಲಿ ಮೂವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಪ್ರಶಸ್ತಿಯು ತಲಾ 5 ಲಕ್ಷ ರೂಪಾಯಿ ನಗದು ಬಹುಮಾನ ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ