ವಿಧಾನಸೌಧದ ಆವರಣದಲ್ಲೇ ಕೆಂಪೇಗೌಡ ಪ್ರತಿಮೆ ಸ್ಥಾಪನೆ: ಸಿಎಂ ಪ್ರಕಟ- ಮೂವರಿಗೆ ಪ್ರಶಸ್ತಿ ಪ್ರದಾನ

Team Newsnap
2 Min Read

ವಿಧಾನಸೌಧದ ಆವರಣದಲ್ಲಿಯೇ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೋಮವಾರ ಪ್ರಕಟಿಸಿದರು

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಮುಂದಿನ ಕೆಂಪೇಗೌಡ ಜಯಂತಿಯ ಒಳಗಡೆ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಆಗಲಿದೆ. ವಿಧಾನಸೌಧ ಬೆಂಗಳೂರಿನಲ್ಲೇ ಇರೋದ್ರಿಂದ ಕೆಂಪೇಗೌಡರ ಪ್ರತಿಮೆ ಈ ಮೊದಲೇ ಸ್ಥಾಪನೆ ಆಗಬೇಕಿತ್ತು. ಆ ತಪ್ಪುಗಳನ್ನು ಸರಿಪಡಿಸುತ್ತೇವೆ ಎಂದು ಹೇಳಿದರು. ಇದನ್ನು ಓದಿ – ಜುಲೈ 1 ರಿಂದ ಎಲೆಕ್ಟ್ರಾನಿಕ್ ಸಿಟಿ – ಅತ್ತಿಬೆಲೆ ಟೋಲ್ ಶುಲ್ಕ ಹೆಚ್ಚ

WhatsApp Image 2022 06 27 at 2.34.36 PM

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಸ್‍ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಬ್ಯಾಂಡ್ಮಿಟನ್ ತಾರೆ ಪ್ರಕಾಶ್ ಪಡುಕೋಣೆ ಈ ಮೂವರಿಗೆ 5 ಲಕ್ಷ ನಗದು, ಪ್ರಶಸ್ತಿ ಫಲಕ ಒಳಗೊಂಡ ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದರು. ನಾರಾಯಣಮೂರ್ತಿ ಪರವಾಗಿ ಪತ್ನಿ ಸುಧಾಮೂರ್ತಿ ಪ್ರಶಸ್ತಿ ಸ್ವೀಕರಿಸಿದರು. ಪ್ರಕಾಶ್ ಪಡುಕೋಣೆ ಪರವಾಗಿ ವಿಮಲ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ಸಚಿವರಾದ ಅಶೋಕ್, ಅಶ್ವತ್ಥನಾರಾಯಣ್ ಸೇರಿದಂತೆ ಸಚಿವರು, ಶಾಸಕರು ಭಾಗಿಯಾಗಿದ್ದಾರೆ.

ಜುಲೈ 1 ರಿಂದ ಎಲೆಕ್ಟ್ರಾನಿಕ್ ಸಿಟಿ – ಅತ್ತಿಬೆಲೆ ಟೋಲ್ ಶುಲ್ಕ ಹೆಚ್ಚ

ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಹಾಗೂ ಅತ್ತಿಬೆಲೆ ಟೋಲ್ ಶುಲ್ಕ ಜುಲೈ 1 ರಿಂದ ಶೇ. 20 ರಷ್ಟು ಏರಿಕೆ ಕಾಣಲಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‍ಎಚ್‍ಎಐ) ಟೋಲ್ ಹೆಚ್ಚಳದ ಬಗ್ಗೆ ಎಲಿವೇಟೆಡ್ ಟೋಲ್‍ವೇ ಕಂಪನಿ ಮನವಿ ಸಲ್ಲಿಸಿತ್ತು.

ಈ ಮನವಿಗೆ ಎನ್‍ಎಚ್‍ಎಐ ಗ್ರೀನ್ ಸಿಗ್ನಲ್ ನೀಡಿದೆ. ಪರಿಷ್ಕೃತ ಟೋಲ್ ಶುಲ್ಕ ಜುಲೈ 1 ರಿಂದ ಜಾರಿಗೆ ಬರಲಿದೆ. ಒಪ್ಪಂದದ ಪ್ರಕಾರ ರಸ್ತೆ ಬಳಕೆ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಈ ಶುಲ್ಕವು 2023ರ ಜೂನ್ 30ರವರೆಗೆ ಜಾರಿಯಲ್ಲಿರಲಿದೆ ಎಂದು ಬೆಂಗಳೂರು ಎಲಿವೇಟೆಡ್ ಟೋಲ್‍ವೇ ಕಂಪನಿ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.

ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಅತ್ತಿಬೆಲೆ ಎರಡೂ ಟೋಲ್ ಗೇಟ್‍ಗಳಿಗೂ ಪರಿಷ್ಕೃತ ಶುಲ್ಕ ಅನ್ವಯವಾಗಲಿದೆ. ಸಿಲ್ಕ್ ಬೋರ್ಡ್ ವೃತ್ತದಿಂದ ಅತ್ತಿಬೆಲೆವರೆಗಿನ ರಸ್ತೆಯಲ್ಲಿ ಐಟಿ ಹಾಗೂ ಇತರೆ ಕಂಪನಿಗಳು ಹೆಚ್ಚಿವೆ. ನಿತ್ಯವೂ ಸಾವಿರಾರು ಮಂದಿ ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಕೊರೊನಾ ಬಳಿಕ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿದೆ,

ಈ ಸಂದರ್ಭದಲ್ಲಿ ಏಕಾಏಕಿ ಶುಲ್ಕ ಹೆಚ್ಚಳ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ.

Share This Article
Leave a comment