ಕೇರಳದಲ್ಲಿ NEET ಪರೀಕ್ಷಾ ವಿದ್ಯಾರ್ಥಿನಿಯರ ಒಳಉಡುಪು ತೆಗೆಸಿದ ಪ್ರಕರಣ- ತನಿಖೆ ಆರಂಭ

Team Newsnap
1 Min Read

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET)ಯ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಿದ ವಿದ್ಯಾರ್ಥಿನಿಯರ ಒಳ ಉಡುಪುಗಳನ್ನು ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲ್ಲಂ ಜಿಲ್ಲೆಯ ಆಯುರ್‌ನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ನಡೆದ ನೀಟ್ ಪರೀಕ್ಷೆಗೆ ಹಾಜರಾಗುವ ವೇಳೆ ಅಲ್ಲಿರುವ ಅಧಿಕಾರಿಗಳ ತಂಡವು ಪರೀಕ್ಷೆ ಬರೆಯುವಾಗ ಒಳ ಉಡುಪನ್ನು ತೆಗೆದಿಟ್ಟು ಪರೀಕ್ಷೆಯನ್ನು ಬರೆಯಲು ಸೂಚಿಸಿದ್ದರು.

ಪರೀಕ್ಷೆಗೆ ಹಾಜರಾದ ಯುವತಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ, ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಮಹಿಳಾ ಅಧಿಕಾರಿಗಳ ತಂಡ ಭರವಸೆ ನೀಡಿದ್ದಾರೆ.

ಚಾತಮಂಗಲಂನಲ್ಲಿರುವ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು ನನ್ನ ಮಗಳು ಸೇರಿದಂತೆ ಮಹಿಳಾ ನೀಟ್ ಆಕಾಂಕ್ಷಿಗಳು ತಮ್ಮ ಒಳಉಡುಪುಗಳನ್ನು ತೆಗೆಯುವಂತೆ ಸಿಬ್ಬಂದಿ ಹೇಳಿದ್ದಾರೆ. ಇದರಿಂದ ಪರೀಕ್ಷೆ ಬರೆಯಲು ಮಹಿಳಾ ಆಕಾಂಕ್ಷಿಗಳಿಗೆ ಮಾನಸಿಕವಾಗಿ ಹಿಂಸೆಯಾಗಿದೆ ಎಂದು 17 ವರ್ಷದ ಯುವತಿಯ ತಂದೆ ನಿನ್ನೆ ಆಕ್ರೋಶ ವ್ಯಕ್ತಪಡಿಸಿದ್ದರು.

ಸಂಗಮದ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬೆಂಗಳೂರು ಯುವಕ ಅಶೊಕ್, ಮೈಸೂರಿನ ಸೃಜನ್ ದೇಹವೂ ಪತ್ತೆ

ಈ ಹಿನ್ನೆಲೆಯಲ್ಲಿ ಸೋಮವಾರ ಮಾನವ ಹಕ್ಕುಗಳ ಆಯೋಗವು ಕೊಲ್ಲಂ ಗ್ರಾಮಾಂತರ ಎಸ್‍ಪಿಗೆ ಈ ಬಗ್ಗೆ ತನಿಖೆ ನಡೆಸಿ 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿತ್ತು.

Share This Article
Leave a comment