ಕೇಶವಾನಂದ ಶ್ರೀಗಳ ವಿಧಿವಶ

Team Newsnap
1 Min Read
photo via @VPSecretariat

ಮಂಗಳೂರು: ಕಾಸರಗೋಡಿನ ಎಡನೀರು ಶಂಕರಾಚಾರ್ಯ ಸಂಸ್ಥಾನದ ಮಠಾಧೀಶ ಕೇಶವಾನಂದ ಭಾರತಿ ಸ್ವಾಮೀಜಿ(79) ಶನಿವಾರ ಮಧ್ಯರಾತ್ರಿ ವಿಧಿವಶರಾಗಿದ್ದಾರೆ. ಎಡನೀರು ಮಠದಲ್ಲಿ ಕೇಶವಾನಂದ ಭಾರತಿ ಸ್ವಾಮೀಜಿ ಶಿಕ್ಷಣ, ಧಾರ್ಮಿಕ, ಸಂಗೀತ, ಯಕ್ಷಗಾನ ಕ್ಷೇತ್ರಗಳಲ್ಲಿ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ಸ್ವಾಮೀಜಿಗಳಿಗೆ ಯಕ್ಷಗಾನದಲ್ಲಿ ಅತೀವ ಆಸಕ್ತಿ ಹೊಂದಿದ್ದರು. ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು. ಪ್ರತಿವರ್ಷ ಮಠದಲ್ಲಿ ಯಕ್ಷಗಾನ ಕೂಟ ನಡೆಸುತ್ತಿದ್ದರು. 1970ರಲ್ಲಿ ಕೇರಳ ಸರ್ಕಾರ ಭೂಸುಧಾರಣೆ ಕಾಯ್ದೆ ಹೆಸರಲ್ಲಿ ಕಾಸರಗೋಡು ಬಳಿಯ ಎಡನೀರು ಮಠಕ್ಕೆ ಸೇರಿದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ನಿರ್ಧಾರವನ್ನು ಕೇಶವಾನಂದ ಭಾರತಿ ಸ್ವಾಮೀಜಿ ವಿರೋಧಿಸಿದ್ದರು. ಈ ಕುರಿತು ‘ಕೇಶವಾನಂದ ಸ್ವಾಮೀಜಿ ವರ್ಸಸ್ ಕೇರಳ ಸರ್ಕಾರ’ವೆಂದೇ ಈ ಪ್ರಕರಣ ದೇಶಾದ್ಯಂತ ಚರ್ಚೆಯಾಗಿತ್ತು. ಈ ಪ್ರಕರಣ ಸುಪ್ರೀಂಕೋರ್ಟ್ ದೊಡ್ಡ ಪೀಠದÀಲ್ಲಿ 68 ದಿನ ನಿರಂತರ ವಿಚಾರಣೆ ನಡೆದಿತ್ತು. ಈ ಪ್ರಕರಣ ಕೇವಲ ಮಠದ ಆಸ್ತಿ ವಿಚಾರಕ್ಕಷ್ಟೇ ಅಲ್ಲದೆ, ಮೂಲಭೂತ ಹಕ್ಕುಗಳ ಮಾನ್ಯತೆಯ ಬಗ್ಗೆಯೂ ವಿಸ್ತøತ ಚರ್ಚೆಗೆ ನಾಂದಿ ಹಾಡಿತು. ಈ ಪ್ರಕರಣದ ತೀರ್ಪನ್ನು ಭಾರತದ ನ್ಯಾಯಾಂಗ ಹಾಗೂ ಸಂವಿಧಾನದ ವಿಚಾರದಲ್ಲಿ ಮಹತ್ತರ ಮೈಲಿಗಲ್ಲು ಎಂದೇ ಪರಿಗಣಿಸಲಾಗುತ್ತದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ 13 ಸದಸ್ಯರ ಅತಿದೊಡ್ಡ ಸಾಂವಿಧಾನಿಕ ನ್ಯಾಯಪೀಠವು ಈ ಪ್ರಕರಣದ ವಿಚಾರಣೆ ನಡೆಸಿದ್ದು ಮತ್ತೊಂದು ವಿಶೇಷವಾಗಿತ್ತು. ಎಡನೀರು ಜಗದ್ಗುರು ಶಂಕರಾಚಾರ್ಯ ಸಂಸ್ಥಾನದ ಮಠಾಧೀಶ ಕೇಶವಾನಂದ ಭಾರತಿ ಸ್ವಾಮೀಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮತ್ತಿತರ ಗಣ್ಯರು ಸಂತಾಪ ವ್ಯಕ್ತಪಡಿಸಿ, ಕಂಬನಿ ಮಿಡಿದಿದ್ದಾರೆ.

Share This Article
Leave a comment