ಇದುವರೆಗೂ ಕನ್ನಡ ಚಿತ್ರ ಮಾಡಿರದ ದಾಖಲೆಯನ್ನು “ಕೆಜಿಎಫ್ 2′ “ರಾಕಿಭಾಯ್ ಸಿನಿಮಾ ಮಾಡಿದೆ. ಕೇವಲ ಎರಡನೇ ವಾರಕ್ಕೆ 1000 ಕೋಟಿ ಕಲೆಕ್ಷನ್ ಮಾಡುವ ಮೂಲಕ ಭಾರತೀಯ ಸಿನಿರಂಗದಲ್ಲಿ ಯಶ್ ಚಿತ್ರ ದಾಖಲೆ ಬರೆದಿದೆ.
ಕೆಜಿಎಫ್ 2′ ಹಬ್ಬ ಜೋರಾಗಿದೆ. ಸಿನಿಮಾ ರಿಲೀಸ್ ಆಗಿ 2 ವಾರ ಕಳೆದರೂ ರಾಕಿಭಾಯ್ ಖದರ್ ಮಾತ್ರ ಕಮ್ಮಿಯಾಗಿಲ್ಲ. ಬಾಲಿವುಡ್ ಬಾಕ್ಸ್ಆಫೀಸ್‌ನಲ್ಲಿ ಹಿಂದಿ ಸಿನಿಮಾಗಳೇ ಮಾಡಿರದ ದಾಖಲೆಯನ್ನ `ಕೆಜಿಎಫ್ 2′ ಸಿನಿಮಾ ಮಾಡಿದೆ. ಇದೀಗ ಬಾಕ್ಸ್ಆಫೀಸ್‌ನಲ್ಲಿ ಸಾವಿರ ಕೋಟಿ ಕ್ಲಬ್ ಸೇರಿದೆ.
ನ್ಯಾಷನಲ್ ಸ್ಟಾರ್ ಯಶ್ ನಟನೆಯ `ಕೆಜಿಎಫ್ 2′ ಎಲ್ಲೆಲ್ಲಿ ಎಷ್ಟು ಕಲೆಕ್ಷನ್ ಗೊತ್ತಾ?
ಕರ್ನಾಟಕದಲ್ಲಿ 153.8 ಕೋಟಿ, ತೆಲುಗು ರಾಜ್ಯದಲ್ಲಿ 125.7 ಕೋಟಿ, ತಮಿಳುನಾಡು 94.24 ಕೋಟಿ, ಕೇರಳದಲ್ಲಿ 53.8 ಕೋಟಿ, ಇತರೆಡೆ 402.9 ಕೋಟಿ, ಒಟ್ಟು 816.3 ಕೋಟಿ ಗಳಿಗೆ, ವಿದೇಶದಲ್ಲಿ 164.2 ಕೋಟಿ ರೂಪಾಯಿ, ಒಟ್ಟು 980.5 ಕೋಟಿ ಕಲೆಕ್ಷನ್ ಮಾಡಿದೆ. ಪ್ರಸ್ತುತ ಹಿಂದಿ ಬಾಕ್ಸ್‌ಆಪೀಸ್‌ನಲ್ಲಿ 353.06 ಕೋಟಿ ಬಾಚಿದೆ.
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ