ಚಿತ್ರರಸಿಕರಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿರುವ ಕೆಜಿಎಫ್-೨ಚಿತ್ರದ ಸ್ಯಾಟಲೈಟ್ ಹಕ್ಕನ್ನು ಜೀ ವಾಹಿನಿ ಭಾರಿ ಮೊತ್ತಕ್ಕೆ ಖರೀದಿ ಮಾಡಿದೆ.
ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಟ್ವಿಟ್ವರ್‌ನಲ್ಲಿ ಈ ವಿಷಯ ತಿಳಿಸಿ, ಚಿತ್ರದ ಪೋಸ್ಟರ್‌ವೊಂದನ್ನು ಹಂಚಿಕೊಂಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಸಹ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಕೆಜಿಎಫ್‌ಚಿತ್ರದ ಹಕ್ಕನ್ನು ಜೀ ವಾಹಿನಿ ಖರೀದಿಸಿದೆ ಎಂದು ಸಂತಸದಿಂದ ಹೇಳಿಕೊಂಡಿದ್ದಾರೆ.
ದಕ್ಷಿಣ ಭಾಷೆಯಗಳಲ್ಲಿನ ಈ ಚಿತ್ರದ ಸ್ಯಾಟಲೈಟ್ ಹಕ್ಕನ್ನು ಜೀ ವಾಹಿನಿ ಖರೀದಿಸಿದೆ. ಈ ವಾಹಿನಿಯ ಕನ್ನಡ, ತೆಲುಗು, ತಮಿಳು ಹಾಗೂ ಕೇರಳ ವಾಹಿನಿಯಲ್ಲಿ ಕೆಜಿಎಫ್ -೨ ಪ್ರಸಾರ ಆಗಲಿದೆ ಎಂದು ಹೇಳಿರುವ ಪ್ರಶಾಂತ್ ನೀಲ್, ಎಷ್ಟು ಮೊತ್ತಕ್ಕೆ ಚಿತ್ರದ ಸ್ಯಾಟಲೈಟ್ ಹಕ್ಕನ್ನು ಖರೀದಿಸಲಾಗಿದೆ ಎಂಬುದನ್ನು ಹೊರಹಾಕಿಲ್ಲ.
https://instagram.com/thenameisyash?utm_medium=copy_link
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು