KGF ಚಿನ್ನದ ಗಣಿಯಲ್ಲಿ ಮತ್ತೆ ಚಿನ್ನ ತೆಗೆಯುವ ಕಾರ್ಯ– ಟೆಂಡರ್ ಕರೆದ ಕೇಂದ್ರ- ಕಾರ್ಮಿಕರಿಗೆ ಬೇಸರ

Team Newsnap
1 Min Read
State-wide strike withdrawn by miners ರಾಜ್ಯಾದ್ಯಂತ ಮುಷ್ಕರ ವಾಪಸ್ ಪಡೆದುಕೊಂಡ ಗಣಿ ಉದ್ಯಮಿಗಳು

ಕೆಜಿಎಫ್ ಚಿನ್ನದ ಗಣಿಯಲ್ಲಿ ಮತ್ತೆ ಚಿನ್ನ ಹೊಳೆಯುವ ಸಾಧ್ಯತೆ ಇದೆ. ಕೆಜಿಎಫ್‍ನಲ್ಲಿ ಚಿನ್ನ ತೆಗೆಯಲು ಕೇಂದ್ರ ಸರ್ಕಾರ ಎರಡು ದಶಕಗಳ ನಂತರ ಕೆಜಿಎಫ್ ಚಿನ್ನದ ಗಣಿಯ ಬಗ್ಗೆ ಆಸಕ್ತಿ ಹೊಂದಿದೆ ಆದರೆ ಕೇಂದ್ರ ಸರ್ಕಾರ ಕಾರ್ಮಿಕರ ಹಿತಾಸಕ್ತಿ ಮರೆತಿರುವುದು ಮಾತ್ರ ಬೇಸರ ವ್ಯಕ್ತವಾಗಿದೆ.

ಕೆಜಿಎಫ್ ಚಿನ್ನದ ಗಣಿಗೆ 2001ರಲ್ಲಿ ಬೀಗ ಹಾಕಿದ ನಂತರ, ಕೇಂದ್ರ ಸರ್ಕಾರ ಕೆಜಿಎಫ್ ಚಿನ್ನದ ಗಣಿಯನ್ನು ಇಲ್ಲಿನ ಕಾರ್ಮಿಕರನ್ನು ಅವರ ಸಂಕಷ್ಟಗಳು ಎಲ್ಲವನ್ನೂ ಮರೆತು ಹೋಗಿತ್ತು. ಚಿನ್ನದ ಗಣಿಗೆ ಬೀಗ ಹಾಕಿದ್ದ ಸರ್ಕಾರ ಕೆಲಸ ಕಳೆದುಕೊಂಡ ಕಾರ್ಮಿಕರಿಗೆ ಯಾವುದೇ ಪರಿಹಾರ ನೀಡದೇ, ನಿವೃತ್ತಿ ಪರಿಹಾರವನ್ನೂ ನೀಡಿರಲಿಲ್ಲ.ಗುಂಡ್ಲುಪೇಟೆಯ ಬಳಿ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ರೈತನ ಮೇಲೆ ಹುಲಿ ದಾಳಿ – ಪ್ರಾಣಾಪಾಯದಿಂದ ಪಾರು

3,500 ಜನ ಕಾರ್ಮಿಕರಿಗೆ 52 ಕೋಟಿ ರೂಪಾಯಿ ಪರಿಹಾರ ನೀಡಬೇಕಿತ್ತು. ಯಾವುದನ್ನೂ ನೀಡದೆ ಚಿನ್ನದ ಗಣಿಗೆ ಬೀಗ ಹಾಕಿತ್ತು ಕಾರ್ಮಿಕ ಸಂಘಟನೆಗಳು ಹತ್ತಾರು ವರ್ಷಕಾಲ ನ್ಯಾಯಕ್ಕಾಗಿ ಸರ್ಕಾರಗಳ ಬಳಿ, ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಲೇ ಇದ್ದಾರೆ. ಇನ್ನು ಕಾರ್ಮಿಕರಿಗೆ ಪರಿಹಾರ ಸಿಕ್ಕಿಲ್ಲ.

ಕೇಂದ್ರ ಸರ್ಕಾರ ಈಗ ಕೆಜಿಎಫ್‍ನಲ್ಲಿ ಇರುವ ಚಿನ್ನವನ್ನು ತೆಗೆದ ನಂತರ ಹೊರ ಹಾಕಿರುವ ಮಣ್ಣಿನಲ್ಲಿ ಅಂದರೆ ಕೆಜಿಎಫ್‍ನಲ್ಲಿರುವ 13 ಸೈನೈಡ್ ಗುಡ್ಡಗಳಲ್ಲಿ ಚಿನ್ನವನ್ನು ಮತ್ತೊಮ್ಮೆ ಶೋಧಿಸುವ ಕೆಲಸಕ್ಕೆ ಟೆಂಡರ್ ಕರೆದಿದೆ.

ಕೆಜಿಎಫ್ ಸುತ್ತಮುತ್ತ 13 ಸೈನೈಡ್ ಗುಡ್ಡಗಳಿವೆ. ಇಲ್ಲಿ 35 ಲಕ್ಷ ಮಿಲಿಯನ್ ಟನ್ ಮಣ್ಣಿದೆ. ಸಂಶೋಧನೆಗಳ ಪ್ರಕಾರ ಒಂದು ಟನ್ ಮಣ್ಣಿನಲ್ಲಿ ಸರಾಸರಿ ಒಂದು ಗ್ರಾಮ್ ಚಿನ್ನ ಸಿಗುತ್ತದೆ. ಅದರಂತೆ 25 ಟನ್ ಚಿನ್ನ ಸಿಗುವ ನಿರೀಕ್ಷೆ ಇದೆ. ಸದ್ಯ ಆ ಮಣ್ಣಿನಲ್ಲಿ ಚಿನ್ನವನ್ನು ಹೊರತೆಗೆಯುವ ಕೆಲಸ ಆರಂಭಿಸಿದ್ದು ಮೊದಲ ಹಂತದ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ.

Share This Article
Leave a comment