ಪಾಕ್ ಪ್ರಧಾನಿ ಇಮ್ರಾನ್ ಖಾನ್ಗೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಶನಿವಾರ ಇಮ್ರಾನ್ ಖಾನ್ ವಿರುದ್ದ ಅವಿಶ್ವಾಸ ಮತ ಯಾಚನೆ ಮಾಡಲು ಕೋರ್ಟ್ ಅದೇಶ ಮಾಡಿದೆ.
ಡೆಪ್ಯೂಟಿ ಸ್ಪೀಕರ್ ಅವಿಶ್ವಾಸ ಗೊತ್ತುವಳಿ ನಿರ್ಣಯದ ಪ್ರಸ್ತಾಪವನ್ನು ವಜಾ ಮಾಡಿರುವುದು ಅಸಂವಿಧಾನಿಕ ಎಂದು ಪಾಕಿಸ್ತಾನ್ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಏಪ್ರಿಲ್ 3 ರಂದು ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ಗೊತ್ತುವಳಿಯನ್ನು ಸಂಸತ್ನಲ್ಲಿ ಮಂಡಿಸಿದ್ದರು. ಆದರೆ ಅಲ್ಲಿನ ಡೆಪ್ಯೂಟಿ ಸ್ಪೀಕರ್ ಅದನ್ನು ವಜಾ ಮಾಡಿ ಆದೇಶ ನೀಡಿದ್ದರು. ಡೆಪ್ಯೂಟಿ ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಿ, ಇಮ್ರಾನ್ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು.
ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಪಾಕ್ ಸುಪ್ರೀಂ ಕೋರ್ಟ್ನ ಪಂಚಪೀಠ, ಇಂದು ಐತಿಹಾಸಿಕ ತೀರ್ಪನ್ನ ಘೋಷಣೆ ಮಾಡಿದೆ. ಸ್ಪೀಕರ್ ನೀಡಿರುವ ಆದೇಶ ಸಂವಿಧಾನ ಬಾಹೀರ ಎಂದಿದೆ.
ಏಪ್ರಿಲ್ 9 ರಂದು ಮತ್ತೆ ವಿರೋಧ ಪಕ್ಷಗಳಿಗೆ ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಲು ಸೂಚನೆ ನೀಡಿದೆ. ಅದರಂತೆ ಏಪ್ರಿಲ್ 9 ರಂದು ಇಮ್ರಾನ್ ಖಾನ್ ಭವಿಷ್ಯ ನಿರ್ಧಾರವಾಗಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ