ಮೈಸೂರು : ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ನಾಲ್ಕನೇ ಗ್ಯಾರಂಟಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರು ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ನಾಯಕ ರಾಹುಲ್ ಗಾಂಧಿ ಮೈಸೂರಿನಲ್ಲಿ ಬುಧವಾರ ಚಾಲನೆ ನೀಡಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಈ ಯೋಜನೆಗೆ ಚಾಲನೆ ಸಿಕ್ಕಿದೆ.
ಸಮಾರಂಭದಲ್ಲಿ ರಿಮೋಟ್ ಬಟನ್ ಒತ್ತುವ ಮೂಲಕ 2000 ರು ಚೆಕ್ ಪ್ರದರ್ಶನ ಮಾಡುವುದರೊಂದಿಗೆ ಗೃಹಲಕ್ಷ್ಮಿ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕೃತ ಚಾಲನೆ ನೀಡಿದರು.
ಸರ್ಕಾರ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಸಂದರ್ಭದಲ್ಲಿ ಸರ್ಕಾರದ ನೂರು ದಿನ ಆಡಳಿತದ ಪುಸ್ತಕವನ್ನು ಕಾಂಗ್ರೆಸ್ ನಾಯಕರು ಬಿಡುಗಡೆ ಮಾಡಿದರು.ಮಾಜಿ CM ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಫಲಾನುಭವಿ ಮಹಿಳೆಯರಿಗೆ ಡಿಬಿಟಿ ಮೂಲಕ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಹಣ ವರ್ಗಾವಣೆ ಮಾಡಿದರು.
- ಬರ ನಿರ್ವಹಣೆ : 31 ಜಿಲ್ಲೆಗಳಿಗೆ 324 ಕೋಟಿ ಬಿಡುಗಡೆ: ಕೃಷಿ ಸಚಿವರು
- ಅನ್ನಭಾಗ್ಯ : ಹಣ ಮನೆಯ 2ನೇ ಯಜಮಾನರ ಖಾತೆಗೆ
- ರಾಜ್ಯದ 63 ಕಡೆ ಲೋಕಾ ದಾಳಿ – ಭ್ರಷ್ಟರನ್ನು ಜಾಲಾಡುತ್ತಿರುವ ಅಧಿಕಾರಿಗಳು
- 2024ರ ಜ. 23 ರಂದು 545 ಪಿಎಸ್ಐ ಹುದ್ದೆಗೆ ಮರು ಪರೀಕ್ಷೆ- ಗೃಹ ಸಚಿವ
- ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಹತ್ಯೆ?; ಸುಪಾರಿ ಕೊಲೆ ಶಂಕೆ
- ಮದಗಜದೊಂದಿಗೆ ಕಾಳಗ : ಮೈಸೂರು ದಸರಾ ಅಂಬಾರಿ ಆನೆ ಅರ್ಜುನ ಸಾವು