ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ.
ಈ ಕೇಸ್‌ನಲ್ಲಿ ಸಂತ್ರಸ್ತೆ ಎನ್ನಲಾದ ಮೈಸೂರಿನ ಕೆ.ಆರ್. ನಗರದ ಮಹಿಳೆಯೊಬ್ಬರನ್ನು ಕಿಡ್ನ್ಯಾಪ್ ಮಾಡಿದ್ದಾರೆಂಬ ದೂರಿನ ಮೇಲೆ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಬಂಧಿತರಾಗಿದ್ದಾರೆ.
ಅವರು ಜಾಮೀನು ಸಿಗದೆ ಪರದಾಟ ನಡೆಸುತ್ತಿರುವ ಈ ಹೊತ್ತಿನಲ್ಲಿ ಅಪಹರಣ ನಡೆದಿದೆ ಎನ್ನಲಾದ ಸಂತ್ರಸ್ತ ಮಹಿಳೆಯ ವಿಡಿಯೊ ವೈರಲ್ ಆಗಿದೆ.
ಆಕೆ, ನನ್ನನ್ನು ಯಾರು ಅಪಹರಣ ಮಾಡಿಲ್ಲ. ನನ್ನ ಮಗ ತಪ್ಪು ತಿಳಿದು ದೂರು ಕೊಟ್ಟಿದ್ದಾನೆ ಎಂಬ ಹೇಳಿಕೆ ನೀಡಿದ್ದಾರೆ. ನಾನು ಸಂಬಂಧಿಕರ ಮನೆಯಲ್ಲಿದ್ದೇನೆ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.
ರೇವಣ್ಣ ಆಗಲಿ, ಪ್ರಜ್ವಲ್ ಆಗಲಿ ಭವಾನಿ ಅಕ್ಕಾ ಆಗಲಿ, ಬಾಬಣ್ಣ ಆಗಲಿ ಯಾರಿಂದಲೂ ತೊಂದರೆ ಆಗಲಿಲ್ಲ ಎಲ್ಲರೂ ಚೆನ್ನಾಗಿ ನೋಡಿಕೊಂಡು ಕಳುಹಿಸಿಕೊಟ್ಟಿದ್ದಾರೆ. ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
ಮಾಹಿತಿ ಯಾರಿಗೆ ಕೊಡಬೇಕು ಅವರಿಗೆ ಕೊಟ್ಟಿದೇನೆ. ಮನೆ ಮುಂದೆ ಹೋಗಿ ಯಾರು ಟಾರ್ಚರ್ ಕೊಡಬೇಡಿ. ನನ್ನ ಕುಟುಂಬದವರಿಗಾಗಲಿ, ಗಂಡನಿಗೆ ಆಗಲಿ ತೊಂದರೆ ಆದರೆ ನೀವೆ ಜವಾಬ್ದಾರಿ ಎಂದು ಸಂತ್ರಸ್ತೆ ಹೇಳಿದ್ದಾರೆ.
More Stories
ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್