ಪಿಎಸ್‌ಐ ಸಮವಸ್ತ್ರ ಧರಿಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ ಒಬ್ಬನನ್ನು ಅಸಲಿ ಪೊಲೀಸರು ಬಂಧಿಸಿರುವ ಘಟನೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ಜರುಗಿದೆ.
ಬೆಂಗಳೂರಿನ ಗೊಟ್ಟಿಗೆರೆ ನಿವಾಸಿ ಸಂಜಯ್ ಬಂಧಿತ ಆರೋಪಿ. ಸಂಜಯ್ ಪಿಎಸ್‌ಐ ಸಮವಸ್ತ್ರ ಧರಿಸಿ ಕೆಎಂ ದೊಡ್ಡಿ ಸುತ್ತಮುತ್ತ ದ್ವಿಚಕ್ರ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದರು. ಬಳಿಕ ಸಂಚಾರಿ ನಿಯಮ ಉಲ್ಲಂಘನೆಯಾಗಿದೆ ಎಂದು ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ. ನಕಲಿ ಪೊಲೀಸ್ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ಸ್ಥಳೀಯರು ಕೆಎಂ ದೊಡ್ಡಿ ಠಾಣೆಯ ಇನ್ಸ್ ಪೆಕ್ಟರ್ ಆನಂದ್‌ಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಎಚ್ಚೆತ್ತ ಕೆಎಂ ದೊಡ್ಡಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಪತಿ ಆತ್ಮಹತ್ಯೆ
ಸಂಜಯ್ ಪಿಎಸ್‌ಐ ಸಮವಸ್ತ್ರದಲ್ಲಿ ಇರುವಾಗಲೇ ಹಿಡಿದು ವಿಚಾರಣೆ ಮಾಡಿದಾಗ ತಾನೊಬ್ಬ ನಕಲಿ ಪೊಲೀಸ್ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಆರೋಪಿ ಸಂಜಯ್‌ಗೆ ವಾರ್ನ್ ಮಾಡಲಾಗಿದ್ದು, ಕೋರ್ಟ್ ಜಾಮೀನಿನ ಮೇಲೆ ಆತನನ್ನು ಬಿಡುಗಡೆ ಮಾಡಲಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ