ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ.
ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿಯಲ್ಲಿ ರಾತ್ರಿಯಿಂದ ಬಿಡುವು ನೀಡಿದ್ದ ಮಳೆ, ಇಂದು ಬೆಳಿಗ್ಗೆ ಯಿಂದ ಬಿರುಸಾಗಿ ಸುರಿಯಲು ಆರಂಭಿಸಿದೆ.
ಮಡಿಕೇರಿ ತಾಲೂಕಿನ ನಾಪೋಕ್ಲು, ಭಾಗಮಂಡಲ, ತಲಕಾವೇರಿ ಭಾಗದಲ್ಲೂ ಭಾರಿ ಮಳೆಯಾಗುತ್ತಿದೆ. ಪರಿಣಾಮ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ಕಳೆದ ನಾಲ್ಕು ದಿನಗಳಿಂದ ತಾಲ್ಲೂಕಿನಾದ್ಯಂತ ಗಾಳಿ ಮಳೆಯಿಂದಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ.
ಈ ಭಾರಿ ಮಳೆಯಿಂದಾಗಿ ಕೊಡಗಿನ ಜಲಪಾತಗಳಿಗೆ ಸಾಕಷ್ಟು ನೀರು ಹರಿದು ಬರುತ್ತಿದೆ. ಜಲಪಾತಗಳಿಗೆ ಮತ್ತೆ ಜೀವಕಳೆ ಬಂದಿದೆ. ನಿರಂತರ ಮಳೆಯಿಂದ ಕೊಡಗಿನ ಹಾರಂಗಿ ಜಲಾಶಯಕ್ಕೆ 992 ಕ್ಯುಸೆಕ್ ಒಳಹರಿವು ಬರುತ್ತಿದೆ.
More Stories
ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!