ಕೊಡಗಿನಲ್ಲಿ ಭಾರೀ ಮಳೆ, ತ್ರಿವೇಣಿ ಸಂಗಮದಲ್ಲಿ ನೀರು ಹೆಚ್ಚಳ

Team Newsnap
1 Min Read

ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ.‌

ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿಯಲ್ಲಿ ರಾತ್ರಿಯಿಂದ ಬಿಡುವು ನೀಡಿದ್ದ ಮಳೆ, ಇಂದು ಬೆಳಿಗ್ಗೆ ಯಿಂದ ಬಿರುಸಾಗಿ ಸುರಿಯಲು ಆರಂಭಿಸಿದೆ.

ಮಡಿಕೇರಿ ತಾಲೂಕಿನ ನಾಪೋಕ್ಲು, ಭಾಗಮಂಡಲ, ತಲಕಾವೇರಿ ಭಾಗದಲ್ಲೂ ಭಾರಿ ಮಳೆಯಾಗುತ್ತಿದೆ. ಪರಿಣಾಮ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ಕಳೆದ ನಾಲ್ಕು ದಿನಗಳಿಂದ ತಾಲ್ಲೂಕಿನಾದ್ಯಂತ ಗಾಳಿ ಮಳೆಯಿಂದಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ.

ಈ ಭಾರಿ ಮಳೆಯಿಂದಾಗಿ ಕೊಡಗಿನ ಜಲಪಾತಗಳಿಗೆ ಸಾಕಷ್ಟು ನೀರು ಹರಿದು ಬರುತ್ತಿದೆ. ಜಲಪಾತಗಳಿಗೆ ಮತ್ತೆ ಜೀವಕಳೆ ಬಂದಿದೆ. ನಿರಂತರ ಮಳೆಯಿಂದ ಕೊಡಗಿನ ಹಾರಂಗಿ ಜಲಾಶಯಕ್ಕೆ‌ 992 ಕ್ಯುಸೆಕ್ ಒಳಹರಿವು ಬರುತ್ತಿದೆ.

Share This Article
Leave a comment