50 ನೇ ಶತಕ ಬಾರಿಸಿ ಸಚಿನ್ ದಾಖಲೆ ಮುರಿದ ಕೊಹ್ಲಿ

Team Newsnap
1 Min Read
  • ಏಕದಿನ ಕ್ರಿಕೆಟ್ ನಲ್ಲಿ ವಿಶ್ವದಾಖಲೆ

ಮುಂಬೈ : ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 2023ರ ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿರಾಟ್ ಕೊಹ್ಲಿ ದಾಖಲೆಯ ಶತಕ ಸಿಡಿಸಿ ಮಿಂಚಿದ್ದಾರೆ.

ಇದು ಏಕದಿನ ಕ್ರಿಕೆಟ್ ನಲ್ಲಿ ಕಿಂಗ್ ಕೊಹ್ಲಿ ಅವರ 50ನೇ ಶತಕವಾಗಿದೆ, ಈ ಮೂಲಕ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರ ಪೈಕಿ ಅಗ್ರಸ್ಥಾನಕ್ಕೇರಿದ್ದಾರೆ.

ಇದುವರೆಗೆ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ಶತಕ ಸಿಡಿಸಿದವರ ಪೈಕಿ ತಲಾ 49 ಶತಕ ಸಿಡಿಸಿದ್ದ ಟೀಂ ಇಂಡಿಯಾದ ಮಾಜಿ ಬ್ಯಾಟರ್ ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ ಜಂಟಿ ಅಗ್ರಸ್ಥಾನದಲ್ಲಿದ್ದರು. ಆದರೀಗ ಕಿವೀಸ್ ವಿರುದ್ಧ 50ನೇ ಶತಕ ಪೂರ್ಣಗೊಳಿಸಿರುವ ವಿರಾಟ್ ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ಇದಲ್ಲದೆ ವಿಶ್ವಕ್ರಿಕೆಟ್ ನಲ್ಲಿ 50 ಏಕದಿನ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ 674 ರನ್ ಗಳಿಸಿದರು, ಇದರಿಂದಾಗಿ ದಕ್ಷಿಣ ಆಫ್ರಿಕಾದಲ್ಲಿ ನಡೆದ 2003ರ ಏಕದಿನ ವಿಶ್ವಕಪ್ ನಲ್ಲಿ ಸಚಿನ್ ತೆಂಡೂಲ್ಕರ್ ಗಳಿಸಿದ 673 ರನ್ ಗಳನ್ನು ಹಿಂದಿಕ್ಕಿದರು.ಬಿ.ವೈ.ವಿಜಯೇಂದ್ರ ‘ಕರ್ನಾಟಕ ಬಿಜೆಪಿ’ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಭಾರತದ ಮಾಜಿ ನಾಯಕ ಕೇವಲ 10 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದಾರೆ, ಇದು 20 ವರ್ಷಗಳ ಹಿಂದೆ ಸಚಿನ್ ತೆಂಡೂಲ್ಕರ್ ಅವರ 11 ಇನ್ನಿಂಗ್ಸ್ ಗಳಿಗಿಂತ ಒಂದು ಕಡಿಮೆಯಾಗಿದೆ. ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್ 2007 ರಲ್ಲಿ ಕೆರಿಬಿಯನ್ ನಲ್ಲಿ ಪ್ರಶಸ್ತಿ ಗೆದ್ದ ಓಟದಲ್ಲಿ 659 ರನ್ ಗಳಿಸಿದ್ದರು.

Share This Article
Leave a comment