ಐಪಿಎಲ್ : ಆರ್‌ಸಿಬಿ ತಂಡದ ನಾಯಕತ್ವಕ್ಕೂ ಕೊಹ್ಲಿ ಗುಡ್ ಬೈ

Team Newsnap
1 Min Read

ಆರ್‌ಸಿಬಿ ತಂಡದ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್. ಆದರೆ ನನ್ನ ಕೊನೆಯ ಐಪಿಎಲ್ ಪಂದ್ಯವನ್ನು ಆಡುವವರೆಗೂ ನಾನು ಆರ್‌ಸಿಬಿ ಆಟಗಾರನಾಗಿ ಮುಂದುವರಿಯುತ್ತೇನೆ. ನನ್ನನ್ನು ನಂಬಿದ್ದಕ್ಕಾಗಿ ಮತ್ತು ನನ್ನನ್ನು ಬೆಂಬಲಿಸಿದ ಎಲ್ಲಾ ಆರ್‌ಸಿಬಿ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ “ಎಂದು ಕೊಹ್ಲಿ ಹೇಳಿದ್ದಾರೆ.

ಟೀಂ ಇಂಡಿಯಾದ ಟಿ20 ತಂಡಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ ವಿರಾಟ್‌ ಕೊಯ್ಲಿ, ಆರ್‌ಸಿಬಿ ಅಭಿಮಾನಿಗಳಿಗೆ ಶಾಕ್‌ ಕೊಟ್ಟಿದ್ದಾರೆ.

ಪ್ರಸಕ್ತ ಸಾಲಿನ ಐಪಿಎಲ್‌ ಮುಕ್ತಾಯದ ಬಳಿಕ ರಾಯಲ್‌ ಚಾಲೆಂಜರ್ಸ್‌ ತಂಡದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡುವು ದಾಗಿ ಖುದ್ದು ಘೋಷಣೆಯನ್ನು ಮಾಡಿದ್ದಾರೆ.

2008 ರಿಂದಲೂ ವಿರಾಟ್‌ ಕೊಯ್ಲಿ ರಾಯಲ್‌ ಚಾಲೆಂಜರ್ಸ್‌ ತಂಡದ ಪರವಾಗಿ ಆಟವಾಡುತ್ತಿದ್ದಾರೆ. ಡೇನಿಯಲ್‌ ವೆಟ್ಟೋರಿ ರಾಜೀನಾಮೆಯ ಬೆನ್ನಲ್ಲೇ ವಿರಾಟ್‌ ಕೊಯ್ಲಿ ಅವರನ್ನು 2013ರಲ್ಲಿ ನಾಯಕನನ್ನಾಗಿ ನೇಮಕ ಮಾಡಲಾಗಿತ್ತು. ವಿರಾಟ್‌ ಕೊಯ್ಲಿ ನಾಯಕತ್ವದಲ್ಲಿ ಆರ್‌ಸಿಬಿ ತಂಡ ಒಟ್ಟು 132 ಪಂದ್ಯಗಳನ್ನು ಆಡಿದ್ದಾರೆ. ಈ ಪೈಕಿ 62 ಪಂದ್ಯಗಳಲ್ಲಿ ಗೆಲುವು ಕಂಡಿದ್ದು, 66 ಪಂದ್ಯಗಳಲ್ಲಿ ಸೋಲನ್ನು ಕಂಡಿದೆ. 2016ರಲ್ಲಿ ಆರ್‌ಸಿಬಿ ಫೈನಲ್‌ ಪ್ರವೇಶಿಸಿತ್ತು.

ಪ್ರಸಕ್ತ ಸಾಲಿನಲ್ಲಿ ಆರ್‌ ಸಿಬಿ ಒಟ್ಟು ಏಳು ಪಂದ್ಯಗಳನ್ನು ಆಡಿದೆ. ಇದರಲ್ಲಿ ಐದು ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.

Share This Article
Leave a comment