ಕೋಟ್ಯಾಂತರ ರೂಪಾಯಿ ಸರ್ಕಾರಿ ಜಮೀನು ನುಂಗಲು ಜಿಲ್ಲಾಧಿಕಾರಿಗಳ ಸಹಿಯನ್ನೇ ನಕಲು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋರ್ಜರಿ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಕೋಲಾರ ಜಿಲ್ಲಾಧಿಕಾರಿ ಸಹಿ ನಕಲು ಮಾಡಿ ಸರ್ಕಾರಿ ಭೂಮಿ ಮಂಜೂರು ಮಾಡಲು ಯತ್ನಿಸಿದ ಇಬ್ಬರನ್ನು ಕೋಲಾರ ನಗರದ ಗಲ್ ಪೇಟೆ ಪೊಲೀಸರು ಬಂಧಿಸಿದ್ದಾರೆ.
ಕಂದಾಯ ಇಲಾಖೆಯ ಆರ್.ಐ ಮಂಜುನಾಥ್ ಹಾಗೂ ಕೇಸ್ ವರ್ಕರ್ ಶೈಲಜಾ ಬಂಧಿತ ಆರೋಪಿಗಳಾಗಿದ್ದಾರೆ.
ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಿರುವ 3.37 ಎಕರೆ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಜಮೀನಿಗೆ, ಮಂಜುನಾಥ್ ಹಾಗೂ ಶೈಲಜಾ ಎಂಬುವರು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ನಕಲು ಸಹಿ ಮಾಡಿ ಈ ದಾಖಲೆ ಸೃಷ್ಟಿಸಿದ್ದರು.
ಈ ಜಮೀನು ಸುಮಾರು 3 ಕೋಟಿ ರೂಪಾಯಿ ಬೆಲೆಬಾಳುತ್ತದೆ ಎಂದು ಅಂದಾಜಿಸಲಾಗಿದೆ.
ಚಾಮುಂಡಿ ಬೆಟ್ಟದಲ್ಲಿ ಹಬ್ಬದ ಸಂಭ್ರಮ – ತಾಯಿ ದರ್ಶನಕ್ಕೆ ಸಾವಿರಾರು ಭಕ್ತರ ಆಗಮನ
ನಗರದ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ತಹಶೀಲ್ದಾರ್ ನಾಗರಾಜ್ ದೂರು ನೀಡಿದ್ದಾರೆ. ದೂರಿನ್ವಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಇಬ್ಬರನ್ನು ಲಾಕ್ ಮಾಡಿ, ಮತ್ತೊಬ್ಬ ಆರೋಪಿಯನ್ನು ಬಲೆ ಬೀಸಿದ್ದಾರೆ. ಆರೋಪಿಗಳು ಸರ್ಕಾರಿ ಜಮೀನು ಕಬಳಿಸಲು ಯತ್ನಿಸಿದ್ದರು. ಘಟನೆ ಸಂಬಂಧ ಗಲ್ ಪೇಟೆ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ