February 18, 2026

Newsnap Kannada

The World at your finger tips!

kota srinivas

ವಿಧಾನ ಪರಿಷತ್ ನ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ್ ಪೂಜಾರಿ ನೇಮಕ

Spread the love

ಬೆಂಗಳೂರು :
ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು
ಆಯ್ಕೆ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ.

ಎನ್​ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ.

ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದರೆ, ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ. ಇನ್ನು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್​ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

error: Content is protected !!