ವಿಜಯಪುರ ನಗರ ಹಾಗೂ ಬಂಗಾರಪೇಟೆ ತಾಲೂಕಿನ ಪತ್ರಕರ್ತರಿಬ್ಬರು ಗುರುವಾರ ಕೋವಿಡ್ ಗೆ ಬಲಿಯಾಗಿದ್ದಾರೆ.
ಯುವ ಪತ್ರಕರ್ತ ಜಾಫರ್ ಕಲಾದಗಿ ಹಾಗೂ ಬಂಗಾರಪೇಟೆ ತಾಲೂಕಿನ ಎ ಎಂ ವೆಂಕಟೇಶ ಅಕಾಲಿಕ ನಿಧನರಾದರು.
ವಿಜಯಪುರದ ಪತ್ರಕರ್ತ ಜಾಫರ್ ಕಲಾದಗಿ (42) ಕೋವಿಡ್ ಗೆ ಬಲಿಯಾಗಿದ್ದಾರೆ.
ಬಿಜಾಪುರ ಮಿರರ್ ಇಂಗ್ಲೀಷ್ ದಿನ ಪತ್ರಿಕೆ ನಡೆಸುತ್ತಿದ್ದ ಜಾಫರ್ ಕಲಾದಗಿ ಕೋವಿಡ್ ಗೆ ತುತ್ತಾಗಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ ತೀವ್ರ ಉಸಿರಾಟದ ಸಮಸ್ಯೆಯಿಂದ ಕೊನೆಯುಸಿರೆಳೆದರು.
ಸಂತಾಪ:
ಪತ್ರಕರ್ತ ಜಾಫರ್ ಹಾಗೂ ಬಂಗಾರಪೇಟೆ ತಾಲೂಕು ಪತ್ರಕರ್ತ ಎ. ಎಂ ವೆಂಕಟೇಶ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಜಾಫರ್ ಹಾಗೂ ವೆಂಕಟೇಶ್ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಘ ಅಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
- ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಹುಡುಕಾಟ ಸ್ಥಗಿತ
- ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
- ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ