ದೇಶದಲ್ಲಿ ಅಕ್ಟೋಬರ್ ವೇಳೆಗೆ ಕೋವಿಡ್ 3 ನೇ ಅಲೆ ಪೀಕ್ ಗೆ ಸಾಧ್ಯತೆ – ಪಿಎಂ ಗೆ ವರದಿ

Team Newsnap
1 Min Read

ದೇಶದಲ್ಲಿ ಕೋವಿಡ್ ಸೋಂಕಿನ‌ 3ನೇ ಅಲೆ ಅಕ್ಟೋಬರ್ ಗೆ ವ್ಯಾಪಿಸುವ ಸಾಧ್ಯತೆ ಬಗ್ಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ ವರದಿಯೊಂದನ್ನು ನೀಡಿದೆ.

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ (ಎನ್‌ಐಡಿಎಂ) ಅಕ್ಟೋಬರ್‌ನಲ್ಲಿ ಕೋವಿಡ್ 3ನೇ ಅಲೆ ಅಪ್ಪಳಿಸುವ ಎಚ್ಚರಿಕೆಯನ್ನು ನೀಡಿದೆ.

ವಿವಿಧ ಕ್ಷೇತ್ರಗಳ ತಜ್ಞರನ್ನು ಒಳಗೊಂಡಿರುವ ಸಮಿತಿಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ರಚನೆ ಮಾಡಿದೆ. ಇದೇ ತಜ್ಞರ ಸಮಿತಿ ಅಕ್ಟೋಬರ್‌ನಲ್ಲಿ ಕೋವಿಡ್ 3ನೇ ಅಲೆ ಪೀಕ್‌ಗೆ ಹೋಗಲಿದೆ ಎಂದು ವರದಿಯಲ್ಲಿ ಹೇಳಿದೆ.

ವಯಸ್ಕರ ಜೊತೆ ಮಕ್ಕಳು ಸಹ ಸೋಂಕಿಗೆ ತುತ್ತಾಗುವ ಸಾಧ್ಯತೆ ಇದೆ. ಅಗತ್ಯ ವೈದ್ಯಕೀಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ವರದಿಯಲ್ಲಿ ತಜ್ಞರ ಸಮಿತಿ ಸಲಹೆಯನ್ನು ನೀಡಿದೆ.

ಕೋವಿಡ್ 3ನೇ ಅಲೆ ಪೀಕ್‌ಗೆ ಹೋದರೆ ಅದಕ್ಕೆ ಸ್ಪಂದಿಸುವಷ್ಟು ವೈದ್ಯರು, ಸಿಬ್ಭಂದಿ, ವೆಂಟಿಲೇಟರ್, ಅಂಬ್ಯುಲೆನ್ಸ್ ಸೇರಿದಂತೆ ಸದ್ಯಕ್ಕೆ ಇಲ್ಲ ಎಂದು ತಿಳಿಸಿದೆ. ಮಕ್ಕಳಿಗೂ ವ್ಯಾಕ್ಸಿನ್ ನೀಡಬೇಕು, ಅಂಗವಿಕಲರ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು ಎಂದು ವರದಿಯಲ್ಲಿ ತಿಳಿಸಲಾಗಿದೆ.‌

ಸೋಂಕು ತಗುಲಿರುವ ಎಲ್ಲಾ ಮಕ್ಕಳಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಅಗತ್ಯವಿಲ್ಲ. ಮನೆಯಲ್ಲಿಯೂ ಚಿಕಿತ್ಸೆ ನೀಡಬಹುದಾಗಿದೆ. ಆಸ್ಪತ್ರೆಗಳಲ್ಲಿ ಕೋವಿಡ್ ವಾರ್ಡ್‌ಗಳಿಗೆ ಎಲ್ಲರ ಭೇಟಿಗೆ ಸಹ ನಿರ್ಬಂಧ ಹೇರಬೇಕು ಎಂದು ವರದಿಯಲ್ಲಿ ಹೇಳಲಾಗಿದೆ.

Share This Article
Leave a comment