January 16, 2025

Newsnap Kannada

The World at your finger tips!

election , politics , kolar

Siddu will not win in Kolar : Minister Sudhakarಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ - ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್‌

ಹೊರ ರಾಜ್ಯದಿಂದ ಬರುವವರಿಗೆ ಕೋವಿಡ್ ವರದಿ ಕಡ್ಡಾಯ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Spread the love

* ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಂಕಿತರ ಕೈಗೆ ಗುರುತು

ಬೆಂಗಳೂರಿಗೆ ಯಾವುದೇ ರಾಜ್ಯದಿಂದ ಬಂದರೂ ಕೋವಿಡ್ ವರದಿ ನೀಡುವುದನ್ನು ಕಡ್ಡಾಯ ಗೊಳಿಸಲಾಗು ವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬಿಬಿಎಂಪಿ ಎಂಟು ವಲಯಗಳ ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಸಂಬಂಧ ಸಭೆ ನಡೆಸಿದ ಬಳಿಕ ಸಚಿವರು ಮಾತನಾಡಿದರು.

ಬೆಂಗಳೂರಿನಲ್ಲಿ 1,400 ಸೋಂಕಿತರು ಪತ್ತೆಯಾಗಿದೆ, ಕಳೆದ ನಾಲ್ಕು ತಿಂಗಳಲ್ಲಿ ಇದು ಅತಿ ಹೆಚ್ಚು. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಹೊರರಾಜ್ಯಗಳಿಂದ ಬರುತ್ತಿರುವವರಲ್ಲಿ ಹೆಚ್ಚಾಗಿ ಕೋವಿಡ್ ಸೋಂಕು ಕಂಡುಬರುತ್ತಿದೆ. ಕರ್ನಾಟಕಕ್ಕೆ ಕೇರಳ, ಮಹಾರಾಷ್ಟ್ರ, ಪಂಜಾಬ್ ಚಂಡೀಗಡದಿಂದ ಬಂದವರಿಗೆ ಮಾತ್ರ ಕೊರೊನಾ ಪರೀಕ್ಷೆ ಮಾಡಬೇಕೆಂದು ಸೂಚಿಸಲಾಗಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಎಲ್ಲ ರಾಜ್ಯದಿಂದ ಬಂದವರಿಗೆ ಈ ನಿಯಮ ಅನ್ವಯಿಸಲು ತೀರ್ಮಾನಿಸಲಾಗಿದೆ ಎಂದರು.

ಸೋಂಕು ನಿಯಂತ್ರಣಕ್ಕೆ ನಿಗದಿತ ಪ್ರದೇಶಗಳಲ್ಲಿ ಸ್ಯಾನಿಟೈಜ್ ಮಾಡಲಾಗುವುದು. ಹಾಸಿಗೆ ಲಭ್ಯತೆ, ಐಸಿಯು ಲಭ್ಯತೆ ಬಗ್ಗೆ ಆನ್ ಲೈನ್ ನಲ್ಲೇ ಮಾಹಿತಿ ದೊರೆಯಲು ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರನ್ನು ಕೋವಿಡ್ ಮುಕ್ತ ಮಾಡಲು ಜನರ ಸಹಕಾರ ಬೇಕಿದೆ ಎಂದರು.

ಕೈಗೆ ಗುರುತು:

*ಈ ಬಾರಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಂಕಿತರ ಕೈಗೆ ಮಾತ್ರ ಸೀಲ್ ಹಾಕಲು ನಿರ್ಧರಿಸಲಾಗಿದೆ.

ಯುವಕರು, ರೋಗ ಲಕ್ಷಣ ಇಲ್ಲದರು ಸೋಂಕಿತರಾದರೂ ಹೊರಗೆ ಓಡಾಡುವುದರಿಂದ ಸೋಂಕು ಹರಡುತ್ತದೆ. ಇದನ್ನು ನಿಯಂತ್ರಿಸಲು ಕೈಗೆ ಗುರುತು ಹಾಕಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.‌

ರೂಪಾಂತರಿ ವೈರಸ್

ಹೊಸ ವೈರಾಣು ಕಾಣಿಸಿಕೊಂಡಿದೆ ಅಂತಹ ಸುಮಾರು 700 ಪ್ರಕರಣ ಪತ್ತೆಯಾಗಿದೆ. ತಜ್ಞರ ಪ್ರಕಾರ ಇದು ಬಹಳ ಬೇಗ ಹರಡುತ್ತದೆ. ಈ ಬಗ್ಗೆ ಇನ್ನಷ್ಟು ಸಂಶೋಧನೆಗಳಾಗುತ್ತಿವೆ. ಆದ್ದರಿಂದ ಸಾರ್ವಜನಿಕರು ಮುಂದಿನ 2 ತಿಂಗಳು ಬಹಳ ಎಚ್ಚರಿಕೆಯಿಂದಿರಬೇಕು. ಸೋಂಕಿನ ಪ್ರಕರಣಗಳು ಹೆಚ್ಚಾಗಬಾರದು. ಒಂದು ಪ್ರಕರಣ ಕಂಡುಬಂದರೆ 20 ಸಂಪರ್ಕಿತರನ್ನು ಪತ್ತೆ ಮಾಡಿ ಪರೀಕ್ಷೆ ಮಾಡಿಸಲಾಗುತ್ತಿದೆ ಎಂದರು.

ಚಿತ್ರರಂಗದ ಕಲಾವಿದರಿಗೂ ಮನವಿ ಮಾಡಲಾಗಿದೆ. ನಾಯಕ ನಟರು ಕೂಡ ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಅವರು ಕೂಡ ಈ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಸಹಕಾರ ನೀಡಬೇಕು ಎಂದು ಕೋರಿದರು.

ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವರು, ವಿಕ್ಟೋರಿಯಾದಲ್ಲಿ 400 ಹಾಸಿಗೆ ಮೀಸಲಿಡಲಾಗಿದೆ. ಪ್ರಕರಣ ಹೆಚ್ಚಿದರೆ ಹಾಸಿಗೆ ಸಂಖ್ಯೆ ಹೆಚ್ಚಿಸಲಾಗುವುದು. ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ, ಬೌರಿಂಗ್, ಚರಕ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲಾಗುವುದು. ರೋಗಿಗಳ ಸಂಖ್ಯೆ ಇನ್ನೂ ಹೆಚ್ಚಾದರೆ ಖಾಸಗಿ ಆಸ್ಪತ್ರೆಗಳ ಸಹಾಯ ಪಡೆಯಲಾಗುವುದು. ಈ ಕುರಿತು ಖಾಸಗಿ ಆಸ್ಪತ್ರೆಗಳೊಂದಿಗೆ ಅಧಿಕಾರಿಗಳು ಈಗಾಗಲೇ ಸಭೆ ನಡೆಸಿದ್ದಾರೆ. ಈಗ ಪ್ರಕರಣ ಹೆಚ್ಚಿದರೂ ಮೊದಲಿನಷ್ಟು ತೀವ್ರತೆ ಇಲ್ಲ. ಆದರೂ ಎಚ್ಚರಿಕೆ ವಹಿಸಲೇಬೇಕು ಎಂದರು.

Copyright © All rights reserved Newsnap | Newsever by AF themes.
error: Content is protected !!