ಕೇರಳದ ಕೋಯಿಕ್ಕೊಡ್ ವಿಮಾನ ಅಪಘಾತ : ಪೈಲೆಟ್ ನಿರ್ಲಕ್ಷ್ಯ ಕಾರಣ

Team Newsnap
1 Min Read

ಕಳೆದ ಒಂದು ವರ್ಷದ ಹಿಂದೆ ಕೇರಳದ ಕೋಯಿಕ್ಕೊಡ್ ನಲ್ಲಿ ಸಂಭವಿಸಿದ ವಿಮಾನ ಅಪಘಾತಕ್ಕೆ ಪೈಲಟ್ ಮಾರ್ಗ ಸೂಚಿಗಳನ್ನು ಪಾಲನೆ ಮಾಡಿರಲಿಲ್ಲ. ನಿರ್ಲಕ್ಷ್ಯ ಮಾಡಿದ್ದರಿಂದ ದುರಂತ ಸಂಭವಿಸಿದೆ

ವಿಮಾನ ಅಪಘಾತ ತನಿಖಾ ಬ್ಯೂರೋ(ಎಎಐಬಿ) 267 ಪುಟಗಳ ವರದಿ ನೀಡಿದೆ.
ದುಬೈಯಿಂದ ವಂದೇ ಭಾರತ್ ಮಿಷನ್ ಅಡಿ 2020ರ ಆಗಸ್ಟ್ 7ರಂದು 184 ಪ್ರಯಾಣಿಕರನ್ನು ಹೊತ್ತುಕೊಂಡು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಕೋಯಿಕ್ಕೊಂಡಿಗೆ ಬಂದಿತ್ತು.

ಈ ವೇಳೆ ರನ್‍ವೇ ಸರಿಯಾಗಿ ಕಾಣಿಸದ ಹಿನ್ನೆಲೆಯಲ್ಲಿ ವಿಮಾನ ಕೆಳಗೆ ಜಾರಿ ಬಿದ್ದ ಪರಿಣಾಮ ಇಬ್ಬರು ಪೈಲಟ್ ಸೇರಿದಂತೆ 21 ಮಂದಿ ಮೃತಪಟ್ಟಿದ್ದರು.

ಟೇಬಲ್ ಟಾಪ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಭಾರೀ ಮಳೆ ಬರುತ್ತಿತ್ತು. ಇದರಿಂದಾಗಿ ಪೈಲಟ್‍ಗೆ ರನ್‍ವೇ ಸರಿಯಾಗಿ ಗೋಚರಿಸಲಿಲ್ಲ. ಈ ವೇಳೆ ‘ಗೋ ಅರೌಂಡ್’ ಎಂಬ ಸಂದೇಶವನ್ನು ಏರ್ ಟ್ರಾಫಿಕ್ ಕಂಟ್ರೋಲ್(ಎಟಿಸಿ) ರೂಮಿಗೆ ಕಳುಹಿಸಿದ ಬಳಿಕವೂ ಪೈಲಟ್ ಟಚ್‍ಡೌನ್ ವಲಯವನ್ನು ದಾಟಿ ರನ್‍ವೇಯ ಅರ್ಧ ದೂರದಲ್ಲಿ ಲ್ಯಾಂಡ್ ಮಾಡಿದ್ದಾರೆ. ಇದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ವರದಿ ಹೇಳಿದೆ.

Share This Article
Leave a comment