January 28, 2026

Newsnap Kannada

The World at your finger tips!

politics , KPCC , Mandya

KPCC President D.K. Shi's contest in Mandya is insisted by the local Congress leaders ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿ ಸ್ಪರ್ಧೆಗೆ ಸ್ಥಳೀಯ ಕಾಂಗ್ರೆಸ್ ನಾಯಕರ ಒತ್ತಾಯ

ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿ ಸ್ಪರ್ಧೆಗೆ ಸ್ಥಳೀಯ ಕಾಂಗ್ರೆಸ್ ನಾಯಕರ ಒತ್ತಾಯ

Spread the love

ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪರ್ಧೆ ಮಾಡಬೇಕು ಎಂದು ಮಂಡ್ಯ ಸ್ಥಳೀಯ ಕಾಂಗ್ರೆಸ್‌ ನಾಯಕರು ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ನಿಯೋಗದ ಸದಸ್ಯರು ಈ ಪ್ರಸ್ತಾವನೆ ಇಟ್ಟಿದ್ದಾರೆ.

ಮಾಜಿ ಸಚಿವ ಆತ್ಮಾನಂದ ನೇತೃತ್ವದಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸ್ಥಳೀಯ ನಾಯಕರು ಮಂಡ್ಯದಲ್ಲಿ ಡಿ.ಕೆ ಶಿವಕುಮಾರ್ ಸ್ಪರ್ಧಿಸಬೇಕು ಇಲ್ಲದಿದ್ದರೆ ಸ್ಥಳೀಯ ಮೂಲ ಕಾಂಗ್ರೆಸ್ ನಾಯಕರಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮಂಡ್ಯದಲ್ಲಿ ಹತ್ತಕ್ಕೂ ಅಧಿಕ ಮಂದಿ ಟಿಕೆಟ್ ಆಕಾಂಕ್ಷೆಯಲ್ಲಿದ್ದಾರೆ. ಅಮರಾವತಿ ಚಂದ್ರಶೇಖರ್, ಸಿದ್ದಾರೂಢ ಸತೀಶ್ ಗೌಡ, ರಾಮಲಿಂಗಯ್ಯ, ಬಿ.ಸಿ. ಶಿವಾನಂದ, ಹೆಚ್.ಸಿ ಶಿವಲಿಂಗೇಗೌಡ ಸೇರಿದಂತೆ ಹಲವು ನಾಯಕರು ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.ಇದನ್ನು ಓದಿ –ರಾಮನಗರದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮಾ. 19 ರಂದು ಸಿಎಂ ಶಂಕುಸ್ಥಾಪನೆ

error: Content is protected !!