ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ತೀವ್ರ ಹೃದಯಾಘಾತದಿಂದ ನಿಧನ

Team Newsnap
1 Min Read
KPCC Working President Dhruva Narayan passed away due to a massive heart attack ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ತೀವ್ರ ಹೃದಯಾಘಾತದಿಂದ ನಿಧನ

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಶನಿವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ

ಧ್ರುವ ನಾರಾಯಣ್‌ (62) ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು.

ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು.

2 ಬಾರಿ ಶಾಸಕ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

1983 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಧ್ರುವನಾರಾಯಣ್‌ 1984 ರಲ್ಲಿ ಜಿಕೆವಿಕೆಯ ಎನ್ ಎಸ್ ಯುಐ ಅಧ್ಯಕ್ಷನಾಗಿ ಆಯ್ಕೆಯಾದರು. ನಂತರ 1986 ರಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು, ಆದರೆ 1999ರಲ್ಲಿ ಮೊದಲ ಬಾರಿಗೆ ಸಂತೆಮಾರಳ್ಳಿ ಕ್ಷೇತ್ರದಿಂದ ವಿಧಾನಸಭೆಗೆ ಮೊದಲ ಬಾರಿ ಸ್ಪರ್ಧಿಸಿ ಸೋಲನ್ನನುಭವಿಸಿದ್ದರು. ಆದರೆ 2004 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ 1 ಮತದ ಅಂತರದ ಗೆಲುವು ಸಾಧಿಸಿ ಇತಿಹಾಸವನ್ನು ಸೃಷ್ಟಿಸಿದ್ದರು .

ನಂತರ 2008ರಲ್ಲಿ ಕೊಳ್ಳೆಗಾಲ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅದಾದ ಬಳಿಕ 2009 ಹಾಗೂ 2014 ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ್ದರು. ಆದರೆ ಸೋಲಿನ ಬಳಿಕವೂ ಆ್ಯಕ್ಟೀವ್ ಆಗಿದ್ದರು.

ಸಂಸದರಾಗಿದ್ದ ವೇಳೆ ಅನುದಾನ ಬಳಕೆ ವಿಚಾರದಲ್ಲೂ ಧ್ರುವನಾರಾಯಣ್ ಉತ್ತಮ ಹೆಸರು ಪಡೆದಿದ್ದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆದಿದ್ದರು. ವಿಧಾನ ಸಭಾ ಚುನಾವಣೆಗೆ ನಂಜನಗೂಡು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು.

ಈ ಬಾರಿ ಚುನಾವಣೆಯಲ್ಲಿ ನಂಜನಗೂಡು ಕಾಂಗ್ರೆಸ್‌ ಅಭ್ಯಥಿಯಾಗಿ ಸ್ಪರ್ಧಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು.ಆರೋಗ್ಯ ರಕ್ಷಕ ರಾಗಿ (RAGI)

Share This Article
Leave a comment