230 ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ 01-09-2023ರಿಂದ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-09-2023 ಆಗಿರುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆ ವಿವರ
ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ ಕನ್ನಡ ಭಾಷಾ ಪರೀಕ್ಷೆದೆ
04-11-2023, ಸ್ಪರ್ಧಾತ್ಮಕ ಪರೀಕ್ಷೆ 05-11-2023ರಂದು ನಡೆಸೋದಕ್ಕೆ ನಿಗದಿ ಪಡಿಸಲಾಗಿದೆ.
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600, ಇತರೆ ವರ್ಗದವರಿಗೆ ರೂ.300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50, ಪರಿಶಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯ್ತಿ ನೀಡಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ
ಅರ್ಥಶಾಸ್ತ್ರ, ಗಣಿತ ಒಂದು ವಿಷಯವನ್ನು ಒಳಗೊಂಡಂತೆ ಪದವಿ. ಅಥವಾ ಬಿಕಾಂ ತೇರ್ಗಡೆಯಾಗಿರಬೇಕು.
ಎಕನಾಮಿಕ್ಸ್, ಮ್ಯಾಥಮೆಟಿಕಲ್, ಕಾಮರ್ಸ್ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಅಭ್ಯರ್ಥಿಗಳು ಅವರು ಹೊಂದಿರುವ ವಿದ್ಯಾರ್ಹತೆಯಲ್ಲಿ ಕನಿಷ್ಠ ಯಾವುದೇ ಒಂದು ಸೆಮಿಸ್ಟರ್, ಒಂದು ವರ್ಷದಲ್ಲಿ ವ್ಯಾಸಂಗ ಮಾಡಿದ್ದಲ್ಲಿ, ಸದರಿ ಪದವಿಗಳನ್ನು ಸಹ ಪರಿಗಣಿಸಲಾಗುವುದು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು