November 24, 2024

Newsnap Kannada

The World at your finger tips!

siddarama

ಎರಡು ತಿಂಗಳಲ್ಲಿ ಕೆಪಿಎಸ್‌ಸಿ ಮರು ಪರೀಕ್ಷೆ : ಸಿಎಂ ಘೋಷಣೆ

Spread the love

ಬೆಂಗಳೂರು: ಕೆಪಿಎಸ್‌ಸಿ (KPSC) ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ಮುಂದಿನ 2 ತಿಂಗಳ ಒಳಗಡೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳು ಸಾಮಾಜಿಕ ಜಾಲತಾಣದಲ್ಲಿ ಮರು ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಕನ್ನಡ ಭಾಷಾಂತರದಲ್ಲಿ ಹಲವು ಲೋಪಗಳು ಕಂಡು ಬಂದ ಹಿನ್ನೆಲೆ , ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸಬೇಕೆಂದು ಕೋರಿ ಆಗ್ರಹಿಸಿ ಪ್ರತಿಭಟಿಸಿದ್ದರು.

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದ್ದು ,ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.ತೆಲಂಗಾಣ , ಆಂಧ್ರದಲ್ಲಿ ಪ್ರವಾಹ – 27ಕ್ಕೆ ಏರಿಕೆ ಸಾವಿನ ಸಂಖ್ಯೆ

ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!