December 22, 2024

Newsnap Kannada

The World at your finger tips!

bandhamandya

ಕೆ ಆರ್ ಪೇಟೆ ಬಂದ್ ಭಾಗಶಃ ಭಾರಿ ಪ್ರತಿಭಟನೆ – ಯತ್ನಾಳ್ ಪ್ರತಿಕೃತಿ ದಹನ

Spread the love

ಮರಾಠಿ ಅಭಿವೃದ್ಧಿ ಪ್ರಾಧಿಕಾರ ಆರಂಭಿಸುವ ರಾಜ್ಯದ ಬಿಜೆಪಿ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ಕೆ ಆರ್ ಪೇಟೆ ಯಲ್ಲಿ ಭಾರೀ ಪ್ರತಿಭಟನೆ ನಡೆಯಿತು.

ಮೈಸೂರು ಚನ್ನರಾಯಪಟ್ಟಣ ರಸ್ತೆಯ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ರಸ್ತೆ ತಡೆ ಮಾಡಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಸಂಘಟನೆಗಳ ನಾಯಕರನ್ನು ರೋಲ್ ಕಾಲ್ ಗಿರಾಕಿಗಳು ಎಂದು ಬಾಯಿಗೆ ಬಂದಂತೆ ಮಾತನಾಡಿ ನಿಂಧಿಸಿದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕೃತಿ ದಹನ ಮಾಡಿ, ಯತ್ನಾಳ್ ಪ್ರತಿಕೃತಿಗೆ ಚಪ್ಪಲಿಯಲ್ಲಿ ಥಳಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು, ಜಯಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಕೆ.ಎಸ್.ಕುಮಾರ್, ರೈತಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್, ಕರ್ನಾಟಕ ರಕ್ಷಣಾ ಸ್ವಾಭಿಮಾನಿ ಪಡೆಯ ಅಧ್ಯಕ್ಷ ಪ್ರಶಾಂತ್, ಕರವೇ ಅಧ್ಯಕ್ಷ ಶಿವರಾಮೇಗೌಡ ಬಣದ ತಾಲೂಕು ಅಧ್ಯಕ್ಷ ಎ.ಸಿ.ಕಾಂತರಾಜು ನೇತೃತ್ವದಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆ ನಡೆಯಿತು.

bandhmandya1

ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್ ಎಂ.ಶಿವಮೂರ್ತಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಬಂದ್ ಭಾಗಶಃ ಯಶಸ್ವಿ :

ಮರಾಠಿ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಕೆ.ಆರ್.ಪೇಟೆಯಲ್ಲಿ ಭಾಗಶಃ ಯಶಸ್ವಿಯಾಗಿದೆ

ಎಂದಿನಂತೆ ಅಂಗಡಿಮುಂಗಟ್ಟುಗಳ ಬಾಗಿಲು ತೆರೆದು ವ್ಯಾಪಾರ ವ್ಯವಹಾರ ನಡೆಸಿದ ವ್ಯಾಪಾರಿಗಳು ಮಾಮೂಲಿ ಯಾಗಿದ್ದ ಜನಜೀವನ ಹಾಗೂಆಟೋ ಸಂಚಾರವಿತ್ತು.

ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ದೀಪಕ್ ನೇತೃತ್ವದಲ್ಲಿ ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಅವರಿಂದ ಬಿಗಿ ಬಂದೋಬಸ್ತ್

Copyright © All rights reserved Newsnap | Newsever by AF themes.
error: Content is protected !!