ಬ್ಯಾಂಕಿನಿಂದ 7 ಲಕ್ಷ ರು. ಹಣ ಡ್ರಾ ಮಾಡಿ, ಕಾರಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಹಣವನ್ನು ಸಿನಿಮೀಯ ರೀತೀಯಲ್ಲಿ ಎಗರಿಸಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಕೆ ಆರ್ ಪೇಟೆ ಪಟ್ಟಣದಲ್ಲಿ ಗುರುವಾರ ಸಂಭವಿಸಿದೆ.
ಪಟ್ಟಣದ ನಿವಾಸಿ ಶಿಕ್ಷಕ ನಾಗರಾಜು ಹಣ ಕಳೆದುಕೊಂಡವರು. ಪಟ್ಟಣದ ಕೆನರಾ ಬ್ಯಾಂಕ್ ನಿಂದ 7 ಲಕ್ಷ ಹಣ ಡ್ರಾ ಮಾಡಿಕೊಂಡು, ತಮ್ಮ ಕಾರ್ ನ ಒಳಭಾಗದಲ್ಲಿ ಇಟ್ಟುಕೊಂಡು ಮನೆಯ ಬಳಿ ತೆರಳಿದ್ದಾರೆ.
ಮನೆಯ ಮುಂದೆ ಕಾರ್ ನಿಲ್ಲಿಸಿ ಮನೆಯ ಬಾಗಿಲು ತೆರೆದು ಬರುವಷ್ಟರಲ್ಲಿ ನಿಲ್ಲಿಸಿದ್ದ ಕಾರ್ ಡೋರ್ ನ ಗಾಜು ಒಡೆದು ಕಾರಿನಲ್ಲಿ ಹಣ ಎಗರಿಸಿದ್ದಾರೆ.
ಆಗ ಕಾರಿನ ಸೈರನ್ ಹೊಡೆದುಕೊಂಡ ಕೂಡಲೇ ಹಣದೊಂದಿಗೆ ದುಷ್ಕರ್ಮಿಗಳು ಪಲ್ಸರ್ ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ಕಾರಿನಲ್ಲಿ ಬೆನ್ನಟ್ಟಿದರೂ ಯಾವುದೇ ಪ್ರಯೋಜನವಾಗಿಲ್ಲ.
ಕೆ ಆರ್ ಪೇಟೆ ಪಟ್ಟಣ ಪೋಲಿಸರು ಫ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ