ಶಾಲೆಗೆ ಮುಗಿದ ನಂತರ ನಾಪತ್ತೆಯಾಗಿದ್ದ 7ನೇ ತರಗತಿ ಕೆಆರ್ ಪೇಟೆ ವಿದ್ಯಾರ್ಥಿನಿ ನಂದಿತಾ ತುಮಕೂರಿನಲ್ಲಿ ಪತ್ತೆಯಾಗಿದ್ದಾಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಣತಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ನಂದಿತಾ, ಸರ್ಕಾರಿ ಹಾಸ್ಟೆಲ್‍ನಲ್ಲಿದ್ದಳು.
ಕೆ.ಆರ್.ಪೇಟೆ ತಾಲೂಕಿನ ನಂಜೇಗೌಡ ಮಂಗಳ ದಂಪತಿ ಪುತ್ರಿ ನಂದಿತಾಳನ್ನು ತಾತ ಚನ್ನರಾಯಪಟ್ಟಣ ದಾಸರಹಳ್ಳಿ ಗ್ರಾಮದ ಕುಮಾರ್ ಸಾಕಿಕೊಂಡು ವಿದ್ಯಾಭ್ಯಾಸ ಕೊಡಿಸುತ್ತಿದ್ದರು.
ನವೆಂಬರ್ 7 ಸೋಮವಾರದಂದು ಶಾಲೆಗೆ ಬಂದಿದ್ದ ನಂದಿತಾ ಸಂಜೆಯವರೆಗೂ ಶಾಲೆ ಮುಗಿಸಿ ವಾಪಸ್ ಹೋಗಿದ್ದಾಳೆ. ಶಿಕ್ಷಕರು ವಿದ್ಯಾರ್ಥಿಗಳೆಲ್ಲಾ ಹೋದ ಕೆಲಹೊತ್ತಿನಲ್ಲೇ ವಾಪಸ್ ಶಾಲೆಗೆ ಬಂದಿರುವ ನಂದಿತಾ ಶಾಲಾ ಆವರಣದಲ್ಲಿ ಬ್ಯಾಗ್ ಇಟ್ಟು ದಿಢೀರ್ ಕಾಣಿಯಾಗಿದ್ದಳು.
ನವೆಂಬರ್ 7ರಂದು ಸಂಜೆ 5 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಹಾಸ್ಟೆಲ್‍ಗೆ ಹೋಗದೆ ನಾಪತ್ತೆಯಾಗಿದ್ದಳು. ಆದರೆ ಶುಕ್ರವಾರ ಸಂಜೆ ಬಾಲಕಿ ನಂದಿತಾ ತುಮಕೂರಿನಲ್ಲಿ ಪತ್ತೆಯಾಗಿದ್ದು, ನುಗ್ಗೇಹಳ್ಳಿ ಪೊಲೀಸರು ಬಾಲಕಿಯನ್ನು ಕರೆತಂದಿದ್ದಾರೆ. 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ – ಸಚಿವ ನಾಗೇಶ್
ನುಗ್ಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಾಕು ಮಗಳು ಹಾಗೂ ವಿದ್ಯಾರ್ಥಿನಿ ಪತ್ತೆಯಾಗಿರುವುದರಿಂದ ಪೋಷಕರು ಹಾಗೂ ಶಿಕ್ಷಕರು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ.
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
More Stories
ಡ್ರೋನ್ ಪ್ರತಾಪ್ ಡಿಸೆಂಬರ್ 26ರವರೆಗೆ ನ್ಯಾಯಾಂಗ ಬಂಧನ
ಕೃಷಿ ಹೊಂಡದಲ್ಲಿ ಸೋಡಿಯಂ ಹಾಕಿ ಬ್ಲಾಸ್ಟ್: ಡ್ರೋನ್ ಪ್ರತಾಪ್ ಬಂಧನ
ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ಚಿರತೆ