ಕೆಆರ್ ಪೇಟೆ : ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – 32 ಮಂದಿಗೆ ಗಾಯ

Team Newsnap
1 Min Read
KR Pette: KSRTC bus overturns out of control - 32 injured ಕೆಆರ್ ಪೇಟೆ : ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – 32 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ ಹೊಡೆದು ಬಸ್‌ನಲ್ಲಿದ್ದ 32 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

ಬಸ್ ವೇಗದಲ್ಲಿದ್ದರಿಂದ ತಡೆಗೋಡೆ ಮುರಿದಿದೆ. ಬಸ್ ಪಲ್ಟಿಯಾಗಿದ್ದು, ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿದೆ.ಚಾಮುಂಡಿಬೆಟ್ಟದ ಬಳಿ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್‍ನಲ್ಲಿ ಬೆಂಕಿ

ಬಸ್‌ನಲ್ಲಿದ್ದ 32 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರಿಗೆ ಕೆಆರ್ ಪೇಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

ಈ ಸಂಬಂಧ ಕೆಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment