ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಬಂಧಿಸಿದ ಲೋಕಾ ಅಧಿಕಾರಿಗಳು

Team Newsnap
1 Min Read
Billionaire KR Puram Tehsildar Ajith Rai suspended ಕೋಟ್ಯಾಧಿಪತಿ ಕೆ ಆರ್ ಪುರಂ ತಹಶೀಲ್ದಾರ್ ಅಜಿತ್ ರೈ ಅಮಾನತ್ತು

ಬೆಂಗಳೂರು :ಅಕ್ರಮ ಆಸ್ತಿ ಆರೋಪಕ್ಕೆ ಸಂಬಂಧಪಟ್ಟಂತೆ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ನನ್ನು ಲೋಕಯುಕ್ತ ಪೋಲಿಸರು ಬಂಧಿಸಿದ್ದಾರೆ.

ತಹಶೀಲ್ದಾರ್​ ಅಜಿತ್ ರೈ ಮನೆ ಮೇಲೆ ನಿನ್ನೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದ ಲೋಕಾಯುಕ್ತ ಪೊಲೀಸರು ಇಂದು ಕೂಡ ಅವರ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದರು.

ಹೆಚ್ಚಿನ ವಿಚಾರಣೆಗಾಗಿ ಅವರನ್ನು ಲೋಕಾಯುಕ್ತ ಪೋಲಿಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಅಜಿತ್​ ರೈಗೆ ಸಂಬಂಧಿಸಿದ 10 ಕಡೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 1.90 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದು, ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಸೇರಿದಂತೆ ಇತರೆ ಕಡೆಗಳಲ್ಲಿ ಬೇನಾಮಿ ಹೆಸರಿನಲ್ಲಿ ಅವರು ಆಸ್ತಿಯನ್ನು ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.ಶ್ರೀರಂಗಪಟ್ಟಣದ ಹುಲಿಕೆರೆಯಲ್ಲಿ ರೌಡಿ ಶೀಟರ್ ಸುಧೀರ್ ಹತ್ಯೆ

ಈ ಹಿಂದೆ ಕೂಡ ಅಜಿತ್‌ ಅವರ ವಿರುದ್ದ ಅಕ್ರಮ ಆಸ್ತಿ ಆರೋಪ ಕೇಳಿ ಬಂದಿತ್ತು.

Share This Article
Leave a comment