ತೆಲುಗು ಚಿತ್ರರಂಗದ ಹಿರಿಯ ನಟ, ನಿರ್ಮಾಪಕ, ನಟ ಪ್ರಭಾಸ್ ದೊಡ್ಡಪ್ಪ, ಟಾಲಿವುಡ್ ರೆಬೆಲ್ ಸ್ಟಾರ್ ಕೃಷ್ಣಂರಾಜು ಹೈದರಾಬಾದ್ನಲ್ಲಿ ಭಾನುವಾರ ಬೆಳಗಿನ ಜಾವ ನಿಧನರಾದರು.
ನಟ ಕೃಷ್ಣಂರಾಜು (83)ಅವರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.1940 ಜನವರಿ 20 ರಂದು ಜನಿಸಿದ್ದ ಕೃಷ್ಣಂರಾಜು ತೆಲುಗಿನ 187 ಸಿನಿಮಾಗಳಲ್ಲಿ ನಟಿಸಿದ್ದಾರೆ. ಅನಾರೋಗ್ಯದಿಂದ ಬಳುತ್ತಿದ್ದ ಅವರು ಕೆಲ ಸಮಯದಿಂದ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಸೋಮವಾರ ಹೈದರಾಬಾದ್ನಲ್ಲಿ ಅವರ ಅಂತ್ಯ ಕ್ರಿಯೆ ನಡೆಯಲಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರ ದೊಡ್ಡಪ್ಪ ಕೃಷ್ಣಂರಾಜು ಅವರು ಕೊನೆಯದಾಗಿ ಪ್ರಭಾಸ್ ಅವರ ‘ರಾಧೆ ಶ್ಯಾಮ್’ ಸಿನಿಮಾದಲ್ಲಿ ನಟಿಸಿದ್ದರು. ರಾಜಕೀಯದಲ್ಲೂ ಸಕ್ರೀಯರಾಗಿದ್ದ ಕೃಷ್ಣಂರಾಜು ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆ ಬಳಿಕ ಪ್ರಜಾರಾಜ್ಯಂ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ