ಕೆಆರ್ ಎಸ್ ಸಂಪೂರ್ಣ ಭರ್ತಿ:ಜುಲೈ 29 ರಂದು ಸಿಎಂ ಬಾಗೀನ

Team Newsnap
1 Min Read

ಮಂಡ್ಯ: ಕಳೆದ ಎರಡು ವರ್ಷಗಳ ಬರಗಾಲದ ಶಾಪದಿಂದ ಮುಕ್ತವಾದ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಆಣೆಕಟ್ಟೆಯು ಬುಧವಾರ ಸಂಜೆ ಸಂಪೂರ್ಣ ಭರ್ತಿಯಾಗಿದೆ.


ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗೆ ನೀರು ತಲುಪಿದೆ. ಜಲಾಶಯದಲ್ಲಿ ಪ್ರಸಕ್ತ 49.452 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ಕೆ ಆರ್ ಎಸ್ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 29 ರಂದು ಕಾವೇರಿ ಮಾತೆಗೆ ಬಾಗೀ ನ ಅರ್ಪಿಸಲಿದ್ದಾರೆ.

ಕೆಆರ್ ಎಸ್ ಡ್ರಾಂ ನಲ್ಲಿ ಕಳೆದ ವರ್ಷ ಹನಿ ಹನಿ ನೀರಿಗೂ ಪರದಾಡುವ ಸ್ಥಿತಿ ಇತ್ತು ಕಾವೇರಿ ನೀರಿನಲ್ಲಿ ವಾಹನಗಳನ್ನು ಸ್ವಚ್ಛಗೊಳಿಸಿದ್ದಕ್ಕೆ ಬಿಬಿಎಂಪಿ ದಂಡ ವಿಧಿಸಿದ್ದನ್ನು ಮರೆಯುವಂತಿಲ್ಲ. ಒಂದು ಬಿಂದಿಗೆ ನೀರಿಗೂ ಗಂಟೆಗಟ್ಟಲೇ ಕಾಯಬೇಕಾದ ಸ್ಥಿತಿ ಕಳೆದ ಬೇಸಿಗೆಯಲ್ಲಿ ಎದುರಾಗಿತ್ತು.

ಆದರೆ, ಈ ಬಾರಿ ವರುಣ ಕೃಪೆ ತೋರಿದ್ದು, ಕೆಆರ್ ಎಸ್ ಡ್ಯಾಂಗೆ ಮತ್ತೆ ಜೀವಕಳೆ ಬಂದಿದೆ. ಅಲ್ಲದೆ, ರೈತರ ಮುಖದಲ್ಲೂ ಮಂದಹಾಸ ಮೂಡಿದೆ.
ಬರದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಿದ್ದಕ್ಕೆ ಕೆಲವು ತಿಂಗಳುಗಳು ಹಿಂದೆ ರೈತರು ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆಯನ್ನು ನಡೆಸಿದ್ದರು.ರಾಮನಗರಕ್ಕೆ ‘ನಮ್ಮ ಮೆಟ್ರೋ ‘ – BMRCL ನಿಂದ ಟೆಂಡರ್ ಕರೆ

ಬೆಳೆಗೆ ನೀರಿಲ್ಲದೆ ಕಾವೇರಿ ಜಲಾನಯನ ಪ್ರದೇಶದ ರೈತರು ಮೋಡದ ಕಡೆ ಮುಖ ಮಾಡಿ ಯಾವಾಗ ಮಳೆ ಬರುತ್ತದೆ ಎಂದು ಎದುರು ನೋಡುತ್ತಿದ್ದರು. ಆದರೆ, ವರುಣ ತನ್ನ ಮುನಿಸನ್ನು ದೂರ ಮಾಡಿದ್ದು, ಮತ್ತೆ ಕೃಪೆ ತೋರಿದ್ದಾನೆ. ಭಾರಿ ಮಳೆಯಿಂದ ಕೆಆರ್ ಎಸ್ ಡ್ಯಾಂ ತುಂಬಿದ್ದು ಜನರ ನೀರಿನ ಬವಣೆ ನೀಗಿದೆ.

Share This Article
Leave a comment