ಕೆಆರ್‌ಎಸ್ ಜಲಾಶಯ ಬಿರುಕು ಬಿಟ್ಟಿದೆ ಎಂಬ ಚರ್ಚೆ ವಿಚಾರವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಂಹ , ಕೆಆರ್‌ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ ಎಂದು ಅಧಿಕಾರಿಗಳೇ ತಿಳಿಸಿದ್ದಾರೆ. ಅಂಥದ್ರಲ್ಲಿ ಡ್ಯಾಂ ಬಿರುಕು ಬಿಟ್ಟಿದೆ ಅನ್ನೋದು ಸರಿಯಲ್ಲ ಎಂದರು.
ಕೆಆರ್‌ಎಸ್ ನಲ್ಲಿನ ನೀರಾವರಿ ಅಧಿಕಾರಿಗಳ ಜೊತೆ ನಾನು ಮಾತನಾಡಿದ್ದೇನೆ. ಅಲ್ಲಿ ಯಾವುದು ಸಮಸ್ಯೆ ಇಲ್ಲ. ಈ ಹಿಂದೆಯೂ ಕೂಡ ಮೈಸೂರು-ಬೆಂಗಳೂರು ದಶಪಥ ರಸ್ತೆ ಮಾಡುವುದಕ್ಕೂ ಬಿಡಲಿಲ್ಲ. ಸುಳ್ಳು ನೆಪಗಳನ್ನು ಹೇಳಿ ಕೆಲಸ ಮಾಡಲು ಅಡ್ಡಿಪಡಿಸಿದರು. ಅಂತ ಪರೋಕ್ಷವಾಗಿ ಸಂಸದೆ ಸುಮಲತಾಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟರು.
ಗಣಿಗಾರಿಕೆ ಬಗ್ಗೆ ಸುಮಲತಾ ಹೇಳಿಕೆಯನ್ನೇ ಮಾಧ್ಯಮದವರು ಸತ್ಯ ಎಂದು ಭಾವಿಸಬೇಡಿ. ಸತ್ಯದ ಆಳಕ್ಕೆ ಹೋಗಿ ತಿಳಿದುಕೊಳ್ಳುವ ಮನಸ್ಥಿತಿ ಇರಬೇಕಾಗುತ್ತದೆ. ರಾಜಕೀಯವಾಗಿ ಯಾರು ಏನ್ ಬೇಕಾದರೂ ಹೇಳಿಕೆ ಕೊಡಬಹುದು. ಯಾರು ಕೂಡ ಎಲ್ಲಿಯೂ ಅಡ್ಡಿಪಡಿಸಿಲ್ಲ. ಇದೊಂದು ರಾಜಕೀಯ ಅಷ್ಟೇ ಎಂದು ಹೇಳಿದರು.
- ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
- ತಿರುಪತಿ ತಿಮ್ಮಪ್ಪನ ಚಿನ್ನ ಕದಿಯಲು ಹೋಗಿ ಸಿಕ್ಕಿಬಿದ್ದ ಟಿಟಿಡಿ ನೌಕರ
More Stories
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ