ಕೆ.ಆರ್.ಎಸ್. ಆಣೆಕಟ್ಟೆಯಿಂದ 50 ಸಾವಿರ ಕ್ಯುಸೆಕ್ ನೀರು ಹೊರಕ್ಕೆ ಪ್ರವಾಹ ಸಂಭವ

Team Newsnap
0 Min Read

ಮಂಡ್ಯದ ಕೃಷ್ಣರಾಜ ಸಾಗರ ಜಲಾನಯನ ಪ್ರದೇಶದಲ್ಲಿ ಮಳೆ‌ ಹೆಚ್ಚಾಗುತ್ತಿದೆ. ಕೆ.ಆರ್.ಎಸ್. ನಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಆದ್ದರಿಂದ ಕಾವೇರಿ‌ ನದಿಯ ತಗ್ಗು ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಕೆ.ಆರ್.ಎಸ್.ನ ಕಾರ್ಯಪಾಲಕ ಎಂಜಿನಿಯರ್ ವಾಸುದೇವ ಹೇಳಿಕೆ ನೀಡಿ ‘ಕೆ.ಆರ್.ಎಸ್. ನ ಒಳಹರಿವು ಹೆಚ್ಚಳವಾಗಿರುವ ಕಾರಣ ೨೫,೦೦೦-೫೦,೦೦೦ ಕ್ಯೂಸೆಕ್ ನೀರನ್ನು ಅಥವಾ ಅದಕ್ಕೂ ಹೆಚ್ಚಿನ ನೀರನ್ನು ಹೊರ ಬಿಡಲಾಗುವುದು. ಆದ್ದರಿಂದ ಕಾವೇರಿ ತಗ್ಗು ಪ್ರದೇಶ ಮತ್ತು ನದಿಯ ಎರಡೂ ದಂಡೆಗಳಲ್ಲಿ ವಾಸ ಮಾಡುತ್ತಿರುವ ಜನರು ತಮ್ಮ ಆಸ್ತಿ‌ ಹಾಗೂ ಜಾನುವಾರುಗಳ ರಕ್ಷಣೆಗೆ ಸೂಜ್ತ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಿ’ ಎಂದು ಕೋರಿದ್ದಾರೆ.

Share This Article
Leave a comment