ತಿಂಗಳ ನಂತರ 100 ಅಡಿಯ ಗಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

Team Newsnap
1 Min Read

ಮಂಡ್ಯ: ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 100 ಅಡಿಗಳ ಗಡಿ ದಾಟಿದೆ.

ಸೆಪ್ಟೆಂಬರ್ 1 ರಿಂದ 100 ಅಡಿಗಿಂತ ಕಡಿಮೆ ಪ್ರಮಾಣದಲ್ಲಿ ಡ್ಯಾಂನ ನೀರಿನ ಮಟ್ಟ ಇತ್ತು. ಇದೀಗ ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ ಇಂದು 100.36 ಅಡಿಗೆ ಡ್ಯಾಂ ನೀರಿನ ಮಟ್ಟ ಏರಿಕೆಯಾಗಿದೆ.

ಮಳೆ ಬಿದ್ದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳವಾಗಿದೆ ಇದರಿಂದ ಡ್ಯಾಂ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ತಮಿಳುನಾಡು ನೀರಿನ ಕ್ಯಾತೆಯ ನಡುವೆ ಕೆಆರ್‌ಎಸ್ 100 ಅಡಿ ಭರ್ತಿಯಾಗಿರೋದು ಸಮಾಧಾನಕರ ಸಂಗತಿಯಾಗಿದೆ.

ನಿನ್ನೆ 11,800 ಕ್ಯೂಸೆಕ್ ಒಳಹರಿವು ಇತ್ತು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ನಿಂತಿರುವ ಪರಿಣಾಮ ಡ್ಯಾಂಗೆ ಇಂದು 9,052 ಕ್ಯೂಸೆಕ್ ಒಳಹರಿವು ಇದೆ. ನಾಳೆ ಇನ್ನಷ್ಟು ಪ್ರಮಾದಲ್ಲಿ ಒಳಹರಿವು ಕಡಿಮೆಯಾಗಲಿದೆ. ಇತ್ತ ಡ್ಯಾಂನಿಂದ ತಮಿಳುನಾಡಿಗೆ 1,482 ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ.ಕೊಕ್ಕರೆ ಬೆಳ್ಳೂರು ಪಕ್ಷಿಧಾಮ ( Kokkare Belluru Bird Sanctuary )

ಕೆಆರ್‌ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ:

ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 100.36 ಅಡಿಗಳು
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 23.095 ಟಿಎಂಸಿ
ಒಳ ಹರಿವು – 9,052 ಕ್ಯೂಸೆಕ್
ಹೊರ ಹರಿವು – 1,482 ಕ್ಯೂಸೆಕ್

Share This Article
Leave a comment