ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೆಎಸ್‍ಎಂಸಿಎ 1 ಕೋಟಿ ರು ದೇಣಿಗೆ

Team Newsnap
1 Min Read

ಬೆಂಗಳೂರು : ಸರ್ಕಾರಿ ಜಾಹೀರಾತು ಸಂಸ್ಥೆ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಕಂಪೆನಿಯು 2022-23ನೇ ಸಾಲಿನ ಲಾಭಾಂಶದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರು ದೇಣಿಗೆ ನೀಡಿದೆ.

2022-23ನೇ ಸಾಲಿನ ಲಾಭದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಲಾಗಿದೆ ಎಂದು ಕೆಎಸ್‌ಎಂಸಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಗಗನಸಖಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆಎಸ್‌ಎಂಸಿಎ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ-ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಎಸ್ ಸೆಲ್ವಕುಮಾರ್ ಮತ್ತು ಕೆಎಸ್‌ಎಂಸಿಎಯ ಇತರ ಪ್ರತಿನಿಧಿಗಳು, ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್ ಅನ್ನು ನೀಡಿದರು.

Share This Article
Leave a comment