July 6, 2022

Newsnap Kannada

The World at your finger tips!

piller

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ KSRTC ಬಸ್ ಡಿಕ್ಕಿ- ನಾಲ್ವರು ಗಂಭೀರ

Spread the love

ರಸ್ತೆ ಗುಂಡಿಯಿಂದಾಗಿ ಬೆಂಗಳೂರಿನಲ್ಲಿ ಸಂಬಂವಿಸಿದ ಭೀಕರ ಅಪಘಾತ 25 ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನ ಮೈಸೂರು ರೋಡ್ ನಲ್ಲಿ ಮೆಟ್ರೋ ಪಿಲ್ಲರ್‍ಗೆ ಕೆಎಸ್‍ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ರೋಡ್‍ನ ಪೂರ್ಣಿಮಾ ಪ್ಯಾಲೇಸ್ ಬಳಿ ದುರ್ಘಟನೆ ನಡೆದಿದೆ.

ಕೆಆರ್ ನಗರ ಡಿಪೋಗೆ ಸೇರಿದ ಬಸ್ಸಿನಲ್ಲಿ ಸುಮಾರು 45 ಮಂದಿ ಪ್ರಯಾಣಿಕರಿದ್ದರು.ಗುಂಡಿಗೆ ಇಳಿದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಮೆಟ್ರೋ ಪಿಲ್ಲರ್ ಇಲ್ಲದೇ ಇದಿದ್ರೇ ಬಸ್ ಮತ್ತೊಂದು ಭಾಗದ ರಸ್ತೆಗೆ ಹೋಗಿ ದೊಡ್ಡ ಅನಾಹುತವೇ ಆಗಿ ಹೋಗ್ತಿತ್ತು. ನಾಲ್ಕು ಅಡಿಯ ತಡೆಗೋಡೆಗೆ ಗುದ್ದಿ ಕೊನೆಗೆ ಪಿಲ್ಲರ್ ನಂಬರ್ 545 ಗೆ ಬಸ್ ಗುದ್ದಿದೆ.

ಪಿಲ್ಲರ್ ನಂಬರ್ 546 ಬಳಿ ದೊಡ್ಡ ಗುಂಡಿ ಬಿದ್ದಿದೆ. ಗುಂಡಿ ತಪ್ಪಿಸಲು ಹೋಗಿ ಅಪಘಾತವಾಗಿರುವ ಶಂಕೆ ವ್ಯಕ್ತವಾಗಿದೆ. ಇಲ್ಲವೇ ಗುಂಡಿಗೆ ಇಳಿದ ಬಸ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಘಟನೆಯಿಂದ ಚಾಲಕ ಬಿಜೆ ಮಂಜುನಾಥ್ ಹಾಗೂ ಕಂಡೆಕ್ಟರ್ ವೆಂಕಟರಮಣ ಅವರಿಗೆ ಗಾಯಗಳಾಗಿದ್ದು, ಇಬ್ಬರನ್ನೂ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

error: Content is protected !!