December 23, 2024

Newsnap Kannada

The World at your finger tips!

ramaling reddy

KSRTC ಬಸ್ ಟಿಕೆಟ್ ದರ ಹೆಚ್ಚಳ..?

Spread the love

ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರಾಜ್ಯದಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ತೈಲ ಬೆಲೆ ಏರಿಕೆಯಿಂದ ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯವಾಗಿದ್ದು , ನಾವು 2020 ರಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡಿಲ್ಲ , ಡೀಸೆಲ್ ದರ ಹೆಚ್ಚಳದ ಹಿನ್ನೆಲೆ ಟಿಕೆಟ್ ಬೆಲೆ ಹೆಚ್ಚಳಕ್ಕೆ ಚಿಂತನೆ ನಡೆಸಿದ್ದೇವೆ ಎಂದರು.

ಬೆಲೆ ಹೆಚ್ಚಳದ ಬಗ್ಗೆ ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದ್ದು , ಇದೀಗ ಟಿಕೆಟ್ ಬೆಲೆ ಹೆಚ್ಚಳಕ್ಕೆ ಚಿಂತನೆ ನೀಡಲಾಗಿದೆ.

Copyright © All rights reserved Newsnap | Newsever by AF themes.
error: Content is protected !!