ಸರಿಯಾಗಿ ವೇತನ ಸಿಗದಿದ್ದಕ್ಕೆ ಬೇಸರಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್‌ಆರ್‌ಟಿಸಿ ವಾಯುವ್ಯ ವಿಭಾಗದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ
ಬಾಗಲಕೋಟೆ ಜಿಲ್ಲೆ ಬಾದಾಮಿ ಬಸ್ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆರೂರು ಪಟ್ಟಣದ ನಿವಾಸಿ ಭರಮಪ್ಪ ಗೊಂದಿ ( 44) ಮೃತಪಟ್ಟ ಚಾಲಕ.
ನ.2ರಂದು ಮನೆಯಲ್ಲಿ ವಿಷ ಸೇವಿಸಿದ್ದರು. ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ ಬೆಳಗ್ಗೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಸಮಯಕ್ಕೆ ಸರಿಯಾಗಿ ವೇತನ ಸಿಗದೇ ಲಕ್ಷಾಂತರ ರೂ. ಸಾಲ ತೀರಿಸುವುದು ಹೇಗೆಂದು ಮನನೊಂದು ವಿಷ ಸೇವಿಸಿದ್ದಾರೆ ಎನ್ನಲಾಗಿದೆ.
ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ