ಇನ್ನು ಮುಂದೆ, ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಿ ಟಿಕೆಟ್ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ.
ಪ್ರಯಾಣಿಕರು ಡೈನಮಿಕ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಆನ್‌ಲೈನ್ ಪಾವತಿ ಮಾಡುವ ಮೂಲಕ ತಕ್ಷಣ ಟಿಕೆಟ್ ಪಡೆಯಬಹುದು.
ರಾಜ್ಯದ ಸುಮಾರು 8800 ಬಸ್ಸುಗಳಲ್ಲಿ ಈ ಹೊಸ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮತ್ತು ಭೀಮ್ ಆ್ಯಪ್‌ಗಳ ಮೂಲಕ ಯುಪಿಐ ಪಾವತಿಯನ್ನು ಮಾಡಬಹುದಾಗಿದೆ.ಇದನ್ನು ಓದಿ –Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
ಮತ್ತೆ, ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೂಲಕವೂ ಹಣ ಸ್ವೀಕರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು