ಬೆಂಗಳೂರು: ಇಷ್ಟು ದಿನ ಕರ್ನಾಟಕ ಸಾರಿಗೆ ನಿಗಮದ (KSRTC) ಬಸ್ಸುಗಳಲ್ಲಿ ಪ್ರಯಾಣಿಕರು ಟಿಕೆಟ್‌ಗಾಗಿ ನಗದು ಹಣ ಪಾವತಿಸುತ್ತಿದ್ದರು. ಈ ಸಂದರ್ಭದಲ್ಲಿ, ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ಹಣದ ವಿಷಯವಾಗಿ ತಕರಾರುಗಳು ನಡೆಯುತ್ತಿದ್ದವು. ಆದರೆ, ಇದೀಗ ಪ್ರಯಾಣಿಕರ ಬೇಡಿಕೆಗೂನುಸಿ ಕೆಎಸ್‌ಆರ್‌ಟಿಸಿಯು ತನ್ನ ಸೇವೆಗಳನ್ನು ಸೌಲಭ್ಯಕರಗಿಸಿದೆ.
ಇನ್ನು ಮುಂದೆ, ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಿ ಟಿಕೆಟ್ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ.
ಪ್ರಯಾಣಿಕರು ಡೈನಮಿಕ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಆನ್‌ಲೈನ್ ಪಾವತಿ ಮಾಡುವ ಮೂಲಕ ತಕ್ಷಣ ಟಿಕೆಟ್ ಪಡೆಯಬಹುದು.
ರಾಜ್ಯದ ಸುಮಾರು 8800 ಬಸ್ಸುಗಳಲ್ಲಿ ಈ ಹೊಸ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮತ್ತು ಭೀಮ್ ಆ್ಯಪ್‌ಗಳ ಮೂಲಕ ಯುಪಿಐ ಪಾವತಿಯನ್ನು ಮಾಡಬಹುದಾಗಿದೆ.ಇದನ್ನು ಓದಿ –Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
ಮತ್ತೆ, ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೂಲಕವೂ ಹಣ ಸ್ವೀಕರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
More Stories
ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ