January 12, 2025

Newsnap Kannada

The World at your finger tips!

KSRTC , UPI , Ticket

ಕೆ.ಎಸ್.ಆರ್.ಟಿಸಿ ಟ್ರೇಡ್ ಮಾಕ್೯ ರದ್ದಿಲ್ಲ : ಯಾವ ತೀಪೂ೯ ಬಂದಿಲ್ಲ – ಎಂಡಿ ಶಿವಯೋಗಿ ಕಳಸದ್

Spread the love

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್‌ಆರ್‌ಟಿಸಿ’ ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ತೀರ್ಪು ಮತ್ತು ನಿಷೇಧವಿಧಿಸಿರುವ ಬಗ್ಗೆ ಇಂದಿನವರೆಗೂ ಯಾವುದೇ ಆದೇಶ ಬಂದಿಲ್ಲ ಎಂದು ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಕಳಸದ್ ಹೇಳಿದ್ದಾರೆ.

ಈ ಕುರಿತಂತೆ ಪ್ರಕಟನೆ ನೀಡಿರುವ ಎಂಡಿ ಶಿವಯೋಗಿ, ಕೇರಳ ಕೆಎಸ್‌ಆರ್‌ಟಿಸಿಯು, ಕೆಎಸ್ಆರ್‌ಟಿಸಿ / ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿನ ಸುದ್ದಿ ಪ್ರಕಟವಾಗಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ವಕೀಲರನ್ನು ಸಂಪರ್ಕಿಸುತ್ತಿದ್ದೇವೆ. ಅಂತಹ ಯಾವುದೇ ತೀರ್ಪು ಬಂದಿಲ್ಲ ಎಂದಿದ್ದಾರೆ.

ಪತ್ರಿಕೆಗಳಲ್ಲಿ ಈ ರೀತಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹೇಳಿದೆ ಎನ್ನಲಾದ ಅಂಶಗಳೂ ಕೂಡ ಸತ್ಯಕ್ಕೆ ದೂರವಾದ ಹಾಗೂ ಅವೆಲ್ಲವೂ ಕಾನೂನಾತ್ಮಕವಲ್ಲದ ವರದಿಗಳು ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆಯೂ “ಕೆಎಸ್‌ಆರ್‌ಟಿಸಿ”
ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿರವರು
ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿ, ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳ ವರದಿಯನ್ನು ನೋಡಿ ಆಶ್ಚರ್ಯವಾಗಿದೆ. ಇದು ವಸ್ತುಷಃ ಸತ್ಯಕ್ಕೆ ದೂರವಾದ ವರದಿಯಾಗಿದೆ ಎಂದು ತಿಳಿಸಿದ್ದಾರೆ.

ಸಂಸ್ಥೆಯು ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರ್ ರವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶವನ್ನು ಇಂದಿನವರೆಗೂ ಸ್ವೀಕರಿಸಿರುವುದಿಲ್ಲ‌ ಎಂದಿದ್ದಾರೆ.

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆ ಎಸ್ ಆರ್ ಟಿ ಸಿ ಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುಧ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ. ಏತನ್ಮಧ್ಯೆ, ಸದರಿ ಮಂಡಳಿಯನ್ನು 4.04.2021 ರ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ ಮತ್ತು ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕೆಎಸ್‌ಆರ್‌ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್‌ಆರ್‌ಟಿಸಿಯು ತನಗೆ ನೀಡಲಾಗಿರುವ ಟ್ರೇಡ್‌ಮಾರ್ಕ್‌ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು ಎಂದಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!