KSRTCಗೆ ಒಟ್ಟು 1000 ಹೊಸ ಬಸ್ಗಳು ಬರಲಿದ್ದು, ಮೊದಲ ಹಂತದಲ್ಲಿ 100 ಹೊಸ ಕ್ಲಾಸಿಕ್ ಬಸ್ಗಳು ಬಂದಿವೆ. ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ ಬಸ್ಗಳಿಗೆ ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಸೋಮವಾರ ಚಾಲನೆ ನೀಡಿದರು. ಅಶ್ವಮೇಧ ಬಸ್ಗೆ ಚಾಲನೆ ಸಮಾರಂಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಹಾಜರಿದ್ದರು.
ಅಶ್ವಮೇಧ ಕ್ಲಾಸಿಕ್ ಬಸ್ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ ಪಾಯಿಂಟ್ ಟೂ ಪಾಯಿಂಟ್ ಎಕ್ಸ್‌ಪ್ರೆಸ್ ಬಸ್ಸುಗಳಾಗಿವೆ. ಮಹಿಳೆಯರು ಈ ಬಸ್ಸುಗಳಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಚುನಾವಣಾ ಪೂರ್ವ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ KSRTC ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೊಳಿಸಿತ್ತು. ಇದೀಗ ಅಶ್ವಮೇಧ ಬಸ್ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಘೋಷಣೆ ಮಾಡಲಾಗಿದೆ.ವಾಹನ ಸವಾರರಿಗೆ ರಸ್ತೆ ಬಿಡದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವ್ಹೀಲಿಂಗ್
ಸದ್ಯ 100 ಬಸ್ಗಳಿಗೆ ಚಾಲನೆ ನೀಡಲಾಗಿದ್ದು, ಇವು ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಿಗೆ ಕಾರ್ಯಾಚರಣೆ ಆರಂಭಿಸಲಿವೆ. ಮುಂದಿನ ದಿನಗಳಲ್ಲಿ ಒಟ್ಟು ಸಾವಿರ ಅಶ್ವಮೇಧ ಬಸ್ಗಳು ಕೆಎಸ್ಆರ್ಟಿಸಿಗೆ ಬರಲಿದ್ದು, ರಾಜ್ಯದಾದ್ಯಂತ ಕಾರ್ಯಾಚರಣೆ ಆರಂಭಿಸಲಿವೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು