Main News

KSRTCಯ ಅಶ್ವಮೇಧ ಕ್ಲಾಸಿಕ್ ಗೆ ಚಾಲನೆ | ವೈಶಿಷ್ಟ್ಯವನ್ನು ತಿಳಿಯಿರಿ

ಬೆಂಗಳೂರು : KSRTCಯ ಹೊಸ ಅಶ್ವಮೇಧ ಕ್ಲಾಸಿಕ್​ ಬಸ್​​​ಗಳನ್ನು ಕಾರ್ಯಾಚರಣೆಗೆ ಇಳಿಸುತ್ತಿದೆ. ಮಹಿಳಾ ಸುರಕ್ಷತೆ ದೃಷ್ಟಿಯಿಂದ ಹಲವು ಹೊಸ ವೈಶಿಷ್ಟ್ಯ​ಗಳನ್ನು ಒಳಗೊಂಡಿದೆ. ಈ ಬಸ್​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ.

KSRTCಗೆ ಒಟ್ಟು 1000 ಹೊಸ ಬಸ್​ಗಳು ಬರಲಿದ್ದು, ಮೊದಲ ಹಂತದಲ್ಲಿ 100 ಹೊಸ ಕ್ಲಾಸಿಕ್ ಬಸ್​​ಗಳು ಬಂದಿವೆ. ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ ಬಸ್​ಗಳಿಗೆ ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಸೋಮವಾರ ಚಾಲನೆ ನೀಡಿದರು. ಅಶ್ವಮೇಧ ಬಸ್​​ಗೆ ಚಾಲನೆ ಸಮಾರಂಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಹಾಜರಿದ್ದರು.

ರಾಜಧಾನಿಯಿಂದ ಜಿಲ್ಲಾ ಕೇಂದ್ರಗಳಿಗೆ ಸಂಪರ್ಕ

ಅಶ್ವಮೇಧ ಕ್ಲಾಸಿಕ್​ ಬಸ್​​​ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ ಪಾಯಿಂಟ್ ಟೂ ಪಾಯಿಂಟ್ ಎಕ್ಸ್‌ಪ್ರೆಸ್ ಬಸ್ಸುಗಳಾಗಿವೆ. ಮಹಿಳೆಯರು ಈ ಬಸ್ಸುಗಳಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಅಶ್ವಮೇಧ​​​ ವಿಶೇಷತೆಗಳೇನು?

  1. ಮಹಿಳೆಯರ ಸುರಕ್ಷತೆಗಾಗಿ 12 ಪ್ಯಾನಿಕ್ ಬಟನ್
  2. ಜಿಪಿಎಸ್
  3. ಎರಡು ರೇರ್ ಕ್ಯಾಮರಾ
  4. 6 ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್ ವ್ಯ
  5. 52 ಸೀಟು
  6. ಬಸ್ಸಿನ ಒಳಗೆ ಮತ್ತು ಹೊರ ಭಾಗದಲ್ಲಿ LED
  7. ಪ್ರಯಾಣಿಕರು ಲಗೆಜ್ ಇಡಲು ದೊಡ್ಡದಾದ ಸ್ಥಳ
  8. ಅಶ್ವಮೇಧ ಬಸ್​ಗಳಲ್ಲೂ ಉಚಿತದ ಗ್ಯಾರಂಟಿ!

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಚುನಾವಣಾ ಪೂರ್ವ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ KSRTC ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೊಳಿಸಿತ್ತು. ಇದೀಗ ಅಶ್ವಮೇಧ ಬಸ್​ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಘೋಷಣೆ ಮಾಡಲಾಗಿದೆ.ವಾಹನ ಸವಾರರಿಗೆ ರಸ್ತೆ ಬಿಡದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವ್ಹೀಲಿಂಗ್

ಸದ್ಯ 100 ಬಸ್​ಗಳಿಗೆ ಚಾಲನೆ ನೀಡಲಾಗಿದ್ದು, ಇವು ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಿಗೆ ಕಾರ್ಯಾಚರಣೆ ಆರಂಭಿಸಲಿವೆ. ಮುಂದಿನ ದಿನಗಳಲ್ಲಿ ಒಟ್ಟು ಸಾವಿರ ಅಶ್ವಮೇಧ ಬಸ್​ಗಳು ಕೆಎಸ್​ಆರ್​ಟಿಸಿಗೆ ಬರಲಿದ್ದು, ರಾಜ್ಯದಾದ್ಯಂತ ಕಾರ್ಯಾಚರಣೆ ಆರಂಭಿಸಲಿವೆ.

Team Newsnap
Leave a Comment

Recent Posts

2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ‘CWMA’ ಸೂಚನೆ

ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ… Read More

May 21, 2024

5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More

May 21, 2024

ಜ್ಞಾನಬುತ್ತಿ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯುವ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್.‌ ಮತ್ತು ಕೆ.ಎ.ಎಸ್‌ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More

May 21, 2024

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More

May 21, 2024

ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು‌… Read More

May 21, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ

ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More

May 21, 2024