ಸೆಪ್ಟೆಂಬರ್ 20 ರಂದು ನಿಗದಿಯಾಗಿದ್ದ ಕೆ -ಸೆಟ್ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಸೆಪ್ಟೆಂಬರ್ 27ರಂದು ಪರೀಕ್ಷೆ ನಡೆಯಲಿದೆ.
ಈ ಮೊದಲು ರಾಜ್ಯ ಸರ್ಕಾರ ಸೆಪ್ಟೆಂಬರ್ 20 ರಂದು ಕೆ -ಸೆಟ್ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿ ಮೈಸೂರು ವಿಶ್ವವಿದ್ಯಾಲಯಕ್ಕೆ ಸುತ್ತೋಲೆ ಕಳಿಸಿತ್ತು. ಅದೇ ದಿನ ಪೊಲೀಸ್ ಹುದ್ದೆಗಳ ನೇಮಕಾತಿ ಪರೀಕ್ಷೆ ಕೂಡ ನಿಗದಿಯಾಗಿದ್ದು ಇದರಿಂದ ಎರರೂ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಗೊಂದಲ ಉಂಟಾಗಿತ್ತು. ಈ ಬಗ್ಗೆ ಕ್ರಮ ಕೈಗೊಂಡ ಸರ್ಕಾರ ಕೆ -ಸೆಟ್ ಪರೀಕ್ಷೆಯನ್ನು ಸೆಪ್ಟೆಂಬರ್ 20 ರ ಬದಲು 27ಕ್ಕೆ ಮುಂದೂಡಿದೆ. ಮಾಹಿತಿಗೆ http://kset.uni.Mysore.ac.in ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ