ನೀವು ಈಗ ರಾಷ್ಟ್ರೀಯ ಪಕ್ಷದ ನೆರಳಿನಲ್ಲಿ ಇದ್ದೀರಾ. ತಾಕತ್ತು ಇದ್ದರೆ ಪ್ರಾದೇಶಿಕ ಪಕ್ಷ ಕಟ್ಟಿ 10 ಸ್ಥಾನ ಗೆದ್ದು ತೋರಿಸಿ ಎಂದು ಸಿದ್ದರಾಮಯ್ಯ ನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ನಿನ್ನೆ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡಿದ ಮಾತುಗಳಿಗೆ ಟ್ವಿಟರ್ ನಲ್ಲಿ ತಿರುಗೇಟು ನೀಡಿರುವ ಕುಮಾರಸ್ವಾಮಿ, ಜೆಡಿಎಸ್ ಸ್ಥಾನ ಗಳಿಕೆ, ದೇವೇಗೌಡರು, ನನ್ನ ಬಗ್ಗೆ ಅಡಿಗಡಿಗೂ ಟೀಕಿಸುವ ಸಿದ್ದರಾಮಯ್ಯ ನನ್ನ ಸವಾಲು ಸ್ವೀಕರಿಸಲಿ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ನವರ ಉಡಾಫೆ ಮಾತುಗಳಿಗೆ ಪ್ರತಿಕ್ರಿಯಿಸಬಾರದೆಂದು ಇಚ್ಚಿಸಿದ್ದೆ. ಆದರೆ, ಚಾಮುಂಡೇಶ್ವರಿ ಯಲ್ಲಿನ ಭಾಷಣದಿಂದ ಹೊಮ್ಮಿರುವ ಅವರ ದ್ವಂದ್ವ ನಿಲುವಿನ ಬಗ್ಗೆ ಮಾತಾಡಬೇಕಿದೆ. ಅಲ್ಲಿ ಅವರು ಏನಾದರೂ ಹೇಳಿರಲಿ. ಆದರೆ, ಒಳ ಒಪ್ಪಂದದ ಆರೋಪ, ನಾನು ಕುಮಾರಸ್ವಾಮಿಯನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂಬ ಸಿದ್ದು ಅವರ ದ್ವಂದ್ವದ ಬಗ್ಗೆ ಮಾತಾಡುವೆ ಎಂದಿದ್ದಾರೆ.
ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿದ ಬಳಿಕ ಜೆಡಿಎಸ್ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ. ಆಗ ನಿಮ್ಮ ತಾಕತ್ತು ಒಪ್ಪೋಣ ಎಂದು ಟಾಂಗ್ ನೀಡಿದ್ದಾರೆ.
ರಾಜಕೀಯ ಒಳಒಪ್ಪಂದಗಳ ಜನಕ
ಸಿದ್ದರಾಮಯ್ಯನವರೇ ಎಂದೂ ರಾಜಕೀಯ ಒಳ ಒಪ್ಪಂದದ ಬಗ್ಗೆ ಮಾತಾಡಬೇಡಿ. ತಾವು ರಾಜಕೀಯ ಒಳ ಒಪ್ಪಂದಗಳ ಜನಕ. ಅದು ಯಾವಾಗಲೂ ಸಾಬೀತಾಗಿದೆ ಎಂಬುದನ್ನು ಮರೆಯಬೇಡಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇನ್ನೆಂದು ಜೆಡಿಎಸ್‌ನ ಸ್ಥಾನಗಳಿಕೆ ಬಗ್ಗೆ ಲಘುವಾಗಿ ಮಾತಾಡಬೇಡಿ. ಸ್ವತಂತ್ರ ಪ್ರಾದೇಶಿಕ ಪಕ್ಷ ಕಟ್ಟಲು ಬೇಕಿರುವ ನಾಯಕತ್ವ, ಅದು ಬೇಡುವ ಶ್ರಮದ ಬಗ್ಗೆ ನಿಮಗೆ ಅರಿವಿಲ್ಲ. ನಿಮಗೆ ಅದು ಸಾಧ್ಯವೂ ಇಲ್ಲ ಎಂದು ತಿಳಿಸಿದ್ದಾರೆ.
- ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
- 2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
- ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
More Stories
ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು