ಹೆಚ್ ಡಿ ಕುಮಾರಸ್ವಾಮಿ ಅವರು ಮಾರ್ಚ್ 10 ರಂದು ಸೀಟು ಹಂಚಿಕೆ ವಿಚಾರವಾಗಿ ದೆಹಲಿಗೆ ತೆರಳಲಿದ್ದು , ಬಿಜೆಪಿ ನಾಯಕರ ಜೊತೆ ಸಭೆಯಲ್ಲಿ ಮಾತುಕತೆ ನಾಡೆಸಿ ಮಂಡ್ಯ, ಹಾಸನ ಕೋಲಾರ ಕ್ಷೇತ್ರಗಳ ಜೊತೆಗೆ ಹೆಚ್ಚುವರಿಯಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಬೇಡಿಕೆ ಇಡುವ ಸಾಧ್ಯತೆ ಇದೆ.
ಬಿಜೆಪಿ ನಾಯಕರು ಚಾಮರಾಜನಗರ ಲೋಕಸಭಾ ಕ್ಷೇತ್ರ ಬಿಟ್ಟುಕೊಡಲು ನಕಾರ ವ್ಯಕ್ತಪಡಿಸಿದ್ದು ,ಈಗಾಗಲೇ ಪ್ರಾಥಮಿಕ ಹಂತದ ಮಾತುಕತೆ ನಡೆಸಲಾಗಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹೆಚ್ಡಿ ಕುಮಾರಸ್ವಾಮಿಗೆ ಸ್ಪರ್ಧೆಗೆ ಮತ್ತೆ ಒತ್ತಾಯಿಸಲಾಗಿದ್ದು ,ಈ ಬಗ್ಗೆ ಅಷ್ಟಾಗಿ ಒಲವು ತೋರದ ಕುಮಾರಸ್ವಾಮಿ, ಅಭ್ಯರ್ಥಿ ಆಯ್ಕೆ ಸಂಬಂಧ ಎಲ್ಲಾ ತೊಡಕುಗಳನ್ನ ನಿವಾರಿಸುವ ಹಾಗೂ ಪಕ್ಷದ ನಾಯಕರ ನಡುವಿನ ಸಣ್ಣಪುಟ್ಟ ಭಿನ್ನಮತ ನಿವಾರಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ.
ಕುಮಾರಸ್ವಾಮಿ ಎಲ್ಲಾ ನಾಯಕರ ಅಭಿಪ್ರಾಯ ಪಡೆದು , ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ.
ಮಾಜಿ ಸಚಿವ ಪುಟ್ಟರಾಜು ಹೆಸರು ಮಂಡ್ಯ ಕ್ಷೇತ್ರದ ಅಭ್ಯರ್ಥಿ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಮತ್ತೊಂದೆಡೆ ಬಿಜೆಪಿ ಹೈಕಮಾಂಡ್ನಿಂದ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಬಂದರೆ ಮುಂದಿನ ನಿರ್ಧಾರದ ಬಗ್ಗೆಯೂ ಚರ್ಚೆ ನಡೆಸಲಾಗಿದೆ.ಪ್ರಧಾನಿ ಮೋದಿಯಿಂದ ಭಾರತದ ಮೊದಲ ಅಂಡರ್ ವಾಟರ್ ಮೆಟ್ರೋ ಮಾರ್ಗ ಉದ್ಘಾಟನೆ
ಜೆಡಿಎಸ್ ನಾಯಕರು ಎಲ್ಲಾ ಆಯ್ಕೆಗಳನ್ನು ಮುಕ್ತವಾಗಿಟ್ಟುಕೊಳ್ಳುವಂತೆ ಮನವಿ ಮಾಡಿದ್ದು , ಜೆಪಿ ನಾಯಕರ ಜೊತೆಗಿನ ಮಾತುಕತೆ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು