ನಟನೆ ಮಾಡುವುದು ಹೇಗೆ ಎಂಬುದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಕಲಿಯಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ವ್ಯಂಗ್ಯ ಮಾಡಿದರು.
ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ರೋಗ ಇರುವವರನ್ನು ಪತ್ತೆ ಹಚ್ಚಬಹುದು. ಆದರೆ, ರೋಗ ಇರುವಂತೆ ನಟನೆ ಮಾಡುವವರನ್ನು ಪತ್ತೆ ಹಚ್ಚೋದು ಕಷ್ಟ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಪಕ್ಷ ಸಂಘಟನೆ ವಿಚಾರವಾಗಿ ಮೇಲ್ವಿಚಾರಣೆ ವಿಭಾಗದಲ್ಲಿ ನನ್ನ ಹೆಸರು ಕೈ ಬಿಟ್ಟಿದ್ದಾರೆ. ಬಹುಶಃ ನನಗೆ ವಯಸಾಯ್ತು ಎಂದು ಸಂಘಟನೆಯಲ್ಲಿ ಕೈ ಬಿಟ್ಟಿರಬೇಕು. ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೇ ನನ್ನ ಮಾತು ನಡೆಯುತ್ತಿರಲಿಲ್ಲ. ಇನ್ನು ಈಗ ನಡೆಯುತ್ತಾ ಎಂದು ಹೇಳಿದರು.
ನಾನು ಜೆಡಿಎಸ್ ಶಾಸಕ. ಸಚಿವ ಸ್ಥಾನಕ್ಕೆ ಆಸೆ ಪಟ್ಟಿದ್ದರೆ ವಿಶ್ವನಾಥ್, ನಾರಾಯಣಗೌಡರಂತೆ ನಾನು ಸಹ ಪಕ್ಷ ಬೀಡಬಹುದಿತ್ತು. ಆದರೆ, ಕುಮಾರಸ್ವಾಮಿಯನ್ನು ನಾನೇ ಮುಖ್ಯಮಂತ್ರಿ ಮಾಡಿ, ನಾನೇ ಪದಚ್ಯುತಿ ಮಾಡೋ ಕೆಲಸ ಮಾಡಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಂದಿನ ಸ್ಥಳೀಯ ಚುನಾವಣೆಗೂ ಸ್ವತಃ ನಾನೇ ಬಿ. ಫಾರಂ ಕೊಡ್ತೀನಿ ಅಂತ ಅವರು ಹೇಳಿದ್ದಾರೆ. ಆ ಬಗ್ಗೆಯೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ