ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ 14 ತಿಂಗಳು ಸಿಎಂ ಆಗಿದ್ದ ವೇಳೆ ರಾಸಲೀಲೆ ಆಡಿಕೊಂಡೆ ಕಾಲ ಕಳೆದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣದಲ್ಲಿ ಸೋಮವಾರ ಆರೋಪಿಸಿದರು.
ಚನ್ನಪಟ್ಟಣದಲ್ಲಿ ಸುದ್ದಿಗಾರರಜೊತೆ ಮಾತನಾಡಿದ ಸಿಪಿವೈ ಕುಮಾರಸ್ವಾಮಿ ಸಿಎಂ ಆಗಿ ಅವರ ಸಾಧನೆ ಏನು..? 14 ತಿಂಗಳು ಸಿಎಂ ಆಗಿದ್ದ ವೇಳೆ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ರಾಸಲೀಲೆ ಆಡಿಕೊಂಡಿದ್ರು. 14 ತಿಂಗಳು ಸಿಎಂ ಆಗಿದ್ದ ವೇಳೆ ಚನ್ನಪಟ್ಟಣಕ್ಕೆ ಬರುತ್ತಿರಲಿಲ್ಲ. ಇದೀಗ ಚನ್ನಪಟ್ಟಣ ತಾಲೂಕಿಗೆ ಬಂದು ಜನರ ಮುಂದೆ ಕಣ್ಣೀರಿಟ್ಟು ನಾಟಕ ಮಾಡ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ನಾನು ಇನ್ನು ಮುಂದೆ ಈ ಕುಮಾರಸ್ವಾಮಿ ಬಗ್ಗೆ ಬಹುವಚನದಲ್ಲಿ ಮಾತನಾಡೋದಿಲ್ಲ. ಏಕವಚನದಲ್ಲೇ ಮಾತನಾಡುತ್ತೀನಿ. ಕುಮಾರಸ್ವಾಮಿಗೆ ಈಗಾಗಲೇ ಕ್ಷೇತ್ರದ ಜನರು ಉತ್ತರ ನೀಡಿದ್ದಾರೆ. ನನ್ನಿಂದ ಯಾಕಪ್ಪ ಹೆಚ್ಡಿ ಕುಮಾರಸ್ವಾಮಿ ಆಣಿಮುತ್ತುಗಳನ್ನು ಕೇಳ್ತೀರಾ..? ನೇರಾನೇರ ನನ್ನ ಮುಂದೆ ಕೂರಿಸಿ ವೈಯಕ್ತಿಕ ಹಾಗೂ ಸಾರ್ವಜನಿಕ ವಿಚಾರಗಳನ್ನು ಬಹಿರಂಗವಾಗಿ ಮಾತಾಡೋಣ.
ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರಲಿ, ನಾನು ಚರ್ಚೆಗೆ ಸಿದ್ಧನಿದ್ದೇನೆ. ನನ್ನ ಬಗ್ಗೆ ಏಕವಚನದಲ್ಲಿ ಮಾತಾಡಿದ್ರೆ ನಾನೂ ಕೂಡ ಏಕವಚನದಲ್ಲೇ ಮಾತನಾಡುತ್ತೇನೆ. ರಾಸಲೀಲೆ ಬಗ್ಗೆ ಕುಮಾರಸ್ವಾಮಿ ಅವರನ್ನು ಕೇಳಿ ಅವರು ಹೇಳಿಲ್ಲ ಅಂದ್ರೆ ನಾನೇ ಹೇಳ್ತೀನಿ ಎಂದು ಸವಾಲು ಎಸೆದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು