March 11, 2026

Newsnap Kannada

The World at your finger tips!

kumarswamy

ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡಿಯಲ್ಲ – ಕುಮಾರಸ್ವಾಮಿ

Spread the love

ಆರ್ ಆರ್ ನಗರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಆಟ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಆರ್ ಆರ್ ನಗರ ಜೆಡಿಎಸ್ ಅಭ್ಯರ್ಥಿಯಾಗಿ ವಿ. ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ನಾನು ನಿಷ್ಟಾವಂತ ಕಾರ್ಯಕರ್ತನ ಪರ ಇರ್ತೇನೆ. ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಪ್ರಚಾರ ಮಾಡುತ್ತೇನೆ. ಈ ಕ್ಷೇತ್ರದ ಉಸ್ತುವಾರಿ ನಾನೇ ವಹಿಸಿಕೊಂಡಿದ್ದೇನೆ. ಆರ್.ಆರ್ ನಗರ ಕ್ಷೇತ್ರ 2008ರಲ್ಲಿ ರಚನೆಯಾಗಿತ್ತು. ಈವೆರೆಗೆ ಬಿಜೆಪಿ ಒಂದು ಬಾರಿ, ಕಾಂಗ್ರೆಸ್ ಎರಡು ಬಾರಿ ಗೆಲುವು ಸಾಧಿಸಿವೆ ಎಂದರು.

ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ. ಕಾಂಗ್ರೆಸ್ ನಾಯಕರಿಂದ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಬಿಜೆಪಿ ವಿರುದ್ದವೂ ಕಿಡಿಕಾರಿದ ಅವರು, ಕೊರೊನಾ ನಿಯಂತ್ರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಬಿಜೆಪಿಯವರು ಗೆಲ್ಲುವ ಭ್ರಮೆಯಲ್ಲಿದ್ದಾರೆ ಎಂದು ಟೀಕಿಸಿದರು.

error: Content is protected !!